ಪರೀಕ್ಷೆಗೆ ಬಸ್‍ನಲ್ಲಿ ಪ್ರಯಾಣಿಸಲು ಉಚಿತ

ಪರೀಕ್ಷೆಗೆ ಬಸ್‍ನಲ್ಲಿ ಪ್ರಯಾಣಿಸಲು ಉಚಿತ

ಬೆಂಗಳೂರು : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಆ .19 ರಿಂದ ಸೆ.03 ಗೆ ನಿಗದಿ ಪಡಿಸಲಾಗಿದೆ. ಪರೀಕ್ಷೆಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಪತ್ರ ತೋರಿಸೋ ಮೂಲಕ ಬಿಎಂಟಿಸಿ ಬಸ್‍ನಲ್ಲಿ ಪ್ರಯಾಣಿಸಲು ಉಚಿತವಾಗಿ ತೆರಳೋದಕ್ಕೆ ಅನುಮತಿ ನೀಡಿದೆ.
ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಬಿಎಂಟಿಸಿಯು ವಿದ್ಯಾರ್ಥಿ ಸಮುದಾಯ ಹಿತವನ್ನು ಗಮನದಲ್ಲಿಟ್ಟುಕೊಂಡು, ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯು ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್ಸಿನಲ್ಲಿ ಪ್ರಯಾಣಿಸುವಾಗ ದ್ವಿತೀಯ ಪಿಯುಸಿ ಪ್ರವೇಶ ಪತ್ರವನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

Related