ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್ ನಲ್ಲಿ ಹೀಗೂ ಓಡಾಡಬಹುದು..!

ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್ ನಲ್ಲಿ ಹೀಗೂ ಓಡಾಡಬಹುದು..!

ಬೆಂಗಳೂರು: ಪ್ರತಿನಿತ್ಯ ಕೆಎಸ್​ಆರ್​ಟಿಸಿ ಬಸ್ ಬಸ್ಗಳಲ್ಲಿ ಟಿಕೆಟ್ ಕೊಡುವ ಸಂದರ್ಭದಲ್ಲಿ ಚಿಲ್ಲರೆಗಾಗಿ ಯಾವಾಗಲೂ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಜಗಳ ಆಗುತ್ತಲೇ ಇರುತ್ತದೆ. ಈ ಜಗಳಕ್ಕೆ ಬ್ರೇಕ್ ಹಾಕಲು ಇದೀಗ ಕೆಎಸ್​ಆರ್​ಟಿಸಿ ನಿಗಮವು ಮುಂದಾಗಿದೆ.

ಹೌದು, ಕರ್ನಾಟಕ ರಾಜ್ಯದಲ್ಲಿ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್ ನಲ್ಲಿ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಆನ್ಲೈನ್ ಮುಖಾಂತರ ಹಣ ಪಾವತಿಸಬಹುದಾಗಿದ್ದು ಇದಕ್ಕೆ ಶೀಘ್ರವೇ ಕೆ ಎಸ್ ಆರ್ ಟಿ ಸಿ ಅನುಷ್ಠಾನಗೊಳಿಸಲಿದೆ ಎಂಬ ಮಾಹಿತಿಯನ್ನು ತಿಳಿಸಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿ ಟ್ರಾಫಿಕ್ ಗೆ ಬ್ರೇಕ್ ಹಾಕಲು ಇನ್ಮುಂದೆ ನಿರ್ಮಾಣವಾಗಲಿದೆ ಈ ತರ ಫ್ಲೈಓವರ್..!

ಇನ್ನು ಖಾಸಗಿ ಕಂಪೆನಿಯಿಂದ ಒಂದು ಮಷಿನ್​​ಗೆ ಪ್ರತಿ ತಿಂಗಳು 645 ರೂಪಾಯಿ ಬಾಡಿಗೆ ಆಧಾರದಲ್ಲಿ 10245 ಸಾವಿರ ಇಟಿಎಂ ಟಿಕೆಟ್ ಮಷಿನ್​​ಗಳ ಖರೀದಿಗೆ ಕೆಎಸ್​ಆರ್​ಟಿಸಿ ಮುಂದಾಗಿದೆ. ಇದರಿಂದ ಇನ್ಮುಂದೆ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಗೂಗಲ್ ಪೇ, ಫೋನ್ ಪೇ. ಪೇಟಿಎಂ ಮೂಲಕ ಹಣ ಪಾವತಿ ಮಾಡಿ ಟಿಕೆಟ್ ಪಡೆದು ಪ್ರಯಾಣಿಸಬಹುದಾಗಿದೆ. ಈ ನೂತನ ಮಷಿನ್​​ಗಳಲ್ಲಿ ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್​​​ಗಳನ್ನು ಬಳಸಿಯೂ ಹಣ ಪಾವತಿ ಮಾಡಬಹುದು.

6500 ಬಸ್​ಗಳಿಗೆ ಹೊಸ ಮಷಿನ್

ಸದ್ಯ ಈಗ ಇರುವ ಮಷಿನ್​​ಗಳು ರೋಡ್ ಮಧ್ಯೆ ಕೈಕೊಟ್ಟು ಪ್ರಯಾಣಿಕರು ಮತ್ತು ಕಂಡಕ್ಟರ್ ಜೊತೆಗೆ ಜಗಳವಾಗುತ್ತಿದೆ. ಹೊಸ ಮಷಿನ್​ನಿಂದ ಇದು ತಪ್ಪಲಿದೆ. ಇತ್ತೀಚೆಗೆ ಕೆಎಸ್​ಆರ್​ಟಿಸಿ ಬಸ್​​​ಗಳಲ್ಲಿ ಪ್ರಯಾಣ ಮಾಡುವ ಹೆಚ್ಚಿನವರ ಬಳಿ ಕ್ಯಾಶ್ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರ ಅನಕೂಲಕ್ಕಾಗಿ ಇಟಿಎಂ ಸಹಕಾರಿ ಆಗಲಿದೆ. ನಿಗಮದ 6500 ಬಸ್ಸುಗಳಲ್ಲೂ ಹೊಸ ವ್ಯವಸ್ಥೆ ಪರಿಚಯ ಮಾಡಲಾಗುತ್ತದೆ. ಶಕ್ತಿ ಯೋಜನೆಯ ಪಿಂಕ್‌ ಟಿಕೆಟ್​​​ಗಳನ್ನು ಈ ಇಟಿಎಂ ಮಷಿನ್ ಗಳಲ್ಲಿ ಸ್ಕ್ಯಾನ್ ಮಾಡಿ ಅವಕಾಶ ನೀಡುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗುತ್ತಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ

 

Related