“ಕೈ” ಪಕ್ಷ ತನ್ನ 5 ಗ್ಯಾರಂಟಿಗಳನ್ನು ಈಡೇರಿಸಲಿದೆ: ರಮ್ಯಾ

“ಕೈ” ಪಕ್ಷ ತನ್ನ 5 ಗ್ಯಾರಂಟಿಗಳನ್ನು ಈಡೇರಿಸಲಿದೆ: ರಮ್ಯಾ

ಬೆಂಗಳೂರು: 2023ನೇ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ತನ್ನ ಅಧಿಕಾರದ ಗದ್ದು ಏರಿದೆ. ಇಂದು ಕರ್ನಾಟಕ ರಾಜ್ಯದಲ್ಲಿ 24ನೆಯ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದರು. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ ಶಿವಕುಮಾರ್‌ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಕಾಂಗ್ರೆಸ್‌ ತನ್ನ 5 ಗ್ಯಾರಂಟಿಗಳನ್ನು 100 ಪರ್ಸೆಂಟ್‌ ಪೂರೈಸಲಿದೆ ಎಂದು ಹೇಳಿದರು ಈ ಬಾರಿ ಬಹುಮತದೊಂದಿಗೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿರೋದು ತುಂಬಾ ಖುಷಿಯಾಗಿದೆ. ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ 5 ವರ್ಷ ಉತ್ತಮ ಆಡಳಿತ ಕೊಟ್ಟಿದ್ದಾರೆ. ಈ ಬಾರಿಯೂ 5 ವರ್ಷ ಭ್ರಷ್ಟರಹಿತ ಆಡಳಿತವನ್ನ ಕಾಂಗ್ರೆಸ್‌ ಸರ್ಕಾರ ನೀಡಲಿದೆ. ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳನ್ನೂ ಪೂರೈಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related