ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿಟ್ಟ ಹಣ ಬಳಸಿಲ್ಲ: ಸಿಎಂ

ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿಟ್ಟ ಹಣ ಬಳಸಿಲ್ಲ: ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿರುವ ಹಣವನ್ನು ಇತರೆ ಉದ್ದೇಶಕ್ಕಾಗಿ ಬಳಸಿದ್ದಾರೆ ಎಂದು ಹೇಳಲಾಗುತ್ತಿತ್ತು.

ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದಾಗಿ ಬೆಂಗಳೂರಿನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, ನಮ್ಮ ಸರ್ಕಾರ ಎಸ್​​ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೀಸಲಿಟ್ಟಿರುವ ಹಣವನ್ನು ಬಳಕೆ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಸ್​​​ಸಿಪಿ ಮತ್ತು ಟಿಎಸ್‌ಪಿ ಯೋಜನೆಯಲ್ಲಿನ ಅನುದಾನಗಳನ್ನು ಇತರ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಕೆಲವರು ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಕೆಲವು ಮಾಧ್ಯಮಗಳಲ್ಲೂ ಈ ಕುರಿತು ವರದಿಗಳಿವೆ. ಪರಿಶಿಷ್ಟ ಜಾತಿ/ಪಂಗಡಗಳಿಗೆ ಮೀಸಲಿರಿಸಿದ ಅನುದಾನಗಳನ್ನು ಇತರ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುತ್ತಿದ್ದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಕಾಯ್ದೆ 2013ರ ಸೆಕ್ಷನ್ 7(ಡಿ)ಯನ್ನು ರದ್ದುಮಾಡಲು ಈಗಾಗಲೇ ತೀರ್ಮಾನ ಮಾಡಲಾಗಿದೆ. ಬಜೆಟ್‌ನಲ್ಲೂ ಈ ಬಾರಿ ಘೋಷಿಸಲಾಗಿದೆ.

ಇದರ ಪರಿಣಾಮವಾಗಿ ಈ ಕೆಳಗಿನ ಇಲಾಖೆಗಳಿಗೆ ಅನುದಾನ ಹಂಚಿಕೆಯನ್ನು ಕಡಿತಗೊಳಿಸಿದ್ದು, ಅದನ್ನು ಈ ಬಾರಿ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಿಗೆ ಹಂಚಿಕೆ ಮಾಡಲಾಗಿದೆ. ಸೆಕ್ಷನ್ 7(ಡಿ) ಅಡಿಯಲ್ಲಿದ್ದ ಕಾರಣಕ್ಕೆ ಸಾವಿರಾರು ಕೋಟಿ ರೂಪಾಯಿಗಳನ್ನು ರಸ್ತೆ, ಸೇತುವೆಗಳಿಗೆ ಬಳಸಲು ಅವಕಾಶವಿತ್ತು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ಆಗುತ್ತಿದ್ದ ಸಮಸ್ಯೆಯನ್ನು ನಮ್ಮ ಸರ್ಕಾರ ನಿಲ್ಲಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

 

Related