ಈದ್ಗಾ ಮೈದಾನದಲ್ಲಿ ಗಣೇಶ ವಿಗ್ರಹಗಳ ಮಾರಾಟ..

ಈದ್ಗಾ ಮೈದಾನದಲ್ಲಿ ಗಣೇಶ ವಿಗ್ರಹಗಳ ಮಾರಾಟ..

ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸ್ಥಳೀಯ ಶಾಸಕರ ಒತ್ತಡಕ್ಕೆ ಮಣಿಯುತ್ತಿದೆ. ಈ ಕಾರಣದಿಂದ ಅಹೋರಾತ್ರಿ ಬಂದ್ ಆಚರಿಸಲು ತೀರ್ಮಾನಿಸಲಾಗ್ತಿದೆ ಎಂದು ವಿಶ್ವ ಸನಾತ ಪರಿಷತ್ತಿನ ಅಧ್ಯಕ್ಷ ಎಸ್.ಭಾಸ್ಕರನ್ ಹೇಳುತ್ತಾರೆ.

ಚಾಮರಾಜಪೇಟೆ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ತಮ್ಮ ಹೋರಾಟವನ್ನು ಮತ್ತಷ್ಟು ಚುರುಕುಗೊಳಿಸಲು ಚಾಮರಾಜಪೇಟೆ ನಾಗರಿಕರ ಒಕ್ಕೂಟ ಮತ್ತು ವಿಶ್ವ ಸನಾತನ ಪರಿಷತ್ ಮುಂದಾಗಿವೆ. ಬಂದ್ ಮತ್ತು ಹೋರಾಟದ ಮುಂದುವರಿದ ಭಾಗವಾಗಿ ಈದ್ಗಾ ಮೈದಾನದಲ್ಲಿ 30 ಗಣೇಶ ವಿಗ್ರಹ ಮಾರಾಟ ಅಂಗಡಿಗಳನ್ನು ತೆರೆಯಲು ಸಂಘಟನೆಗಳು ಯೋಚಿಸಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿವೆ. ಎರಡು ದಿನಗಳ ಹಿಂದೆ ಸ್ಥಳೀಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ‘ಶಾಂತಿ ಮತ್ತು ಎಲ್ಲರೂ ಒಳಗೊಳ್ಳುವಿಕೆ’ ಸಭೆ ಮಾಡಿದ್ದರು.

ಚಾಮರಾಜಪೇಟೆ ಬಂದ್ ನಲ್ಲಿ ಎಲ್ಲಾ ಹಿಂದೂ ಕಾರ್ಯಕರ್ತರು ಮತ್ತು ಸುತ್ತಮುತ್ತಲಿನ ವ್ಯಾಪಾರಸ್ಥರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಬಂದ್ ಸ್ವಯಂಪ್ರೇರಿತವಾಗಿದ್ದು, ಯಾವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿಲ್ಲ. ಆದರೆ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸ್ಥಳೀಯ ಶಾಸಕರ ಒತ್ತಡಕ್ಕೆ ಮಣಿಯುತ್ತಿದೆ. ಈ ಕಾರಣದಿಂದ ಅಹೋರಾತ್ರಿ ಬಂದ್ ಆಚರಿಸಲು ತೀರ್ಮಾನಿಸಲಾಗ್ತಿದೆ ಎಂದು ವಿಶ್ವ ಸನಾತ ಪರಿಷತ್ತಿನ ಅಧ್ಯಕ್ಷ ಎಸ್.ಭಾಸ್ಕರನ್ ಹೇಳುತ್ತಾರೆ.

Related