ಗಣಿಧಣಿ ಭರ್ಜರಿ ಗೆಲುವು

ಗಣಿಧಣಿ ಭರ್ಜರಿ ಗೆಲುವು

ಕೊಪ್ಪಳ: ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಪಕ್ಷ ಗೆಲುವನ್ನು ಸಾಧಿಸಿದೆ.

ಇದರ ಜೊತೆಗೆ ಗಣಿಧಣಿ ಎಂದು ಹೆಸರಾಗಿದ್ದ ಗಾಲಿ ಜನಾರ್ದನ್ ರೆಡ್ಡಿ ಅವರು ತಮ್ಮದೇ ಆದ ಪಕ್ಷವನ್ನು ಕಟ್ಟಿ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ.

ಹೌದು, ರಾಜ್ಯದಲ್ಲಿ ಗಣಿಧಣಿ ಎಂದೇ ಹೆಸರು ಮಾಡಿರುವ ಬಿಜೆಪಿಯ ಮಾಜಿ ನಾಯಕ ಗಾಲಿ ಜನಾರ್ದನ ರೆಡ್ಡಿ ಈಗ ತಮ್ಮದೇ ಆದ ಹೊಸ ಪಕ್ಷವನ್ನು ಹುಟ್ಟು ಹಾಕಿದ್ದಾರೆ. ಹಲವು ಆರೋಪಗಳನ್ನು ಎದುರಿಸಿರುವ ರೆಡ್ಡಿ ಒಂದು ದಶಕಕ್ಕೂ ಹೆಚ್ಚು ಕಾಲ ರಾಜಕಾರಣದಿಂದ ದೂರವೇ ಸರಿದಿದ್ದರು. ಇದೀಗ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ)ದ ಮೂಲಕ ಮತ್ತೆ ಅಖಾಡಕ್ಕೆ ಇಳಿದಿದ್ದು ನಿರಾಸೆ ಅನುಭವಿಸಿದ್ದಾರೆ. ಆದರೆ ಗಂಗಾವತಿಯಲ್ಲಿ ಅವರು ಗೆಲುವು ಸಾಧಿಸಿದ್ದಾರೆ.

ಗಂಗಾವತಿ ಕ್ಷೇತ್ರದಿಂದ ರೆಡ್ಡಿ ಸ್ಪರ್ಧೆಗೆ ಇಳಿದಿದ್ದರೆ, ಪತ್ನಿ ಲಕ್ಷ್ಮೀ ಅರುಣಾ ಅವರನ್ನು ಬಳ್ಳಾರಿ ನಗರ ಕ್ಷೇತ್ರದಲ್ಲಿ ತಮ್ಮ ಹಿರಿಯ ಸಹೋದರ ಸೋಮಶೇಖರ ರೆಡ್ಡಿ ವಿರುದ್ಧವೇ ಅದೃಷ್ಟ ಪರೀಕ್ಷೆಗೆ ಇಳಿಸಿದ್ದರು. ಆದರೆ ಇಲ್ಲಿ ಅವರೂ ನಾರಾ ಭರತ್ ರೆಡ್ಡಿ ಗೆಲುವು ಸಾಧಿಸಿದ್ದು, ಅರುಣಾ ಲಕ್ಷ್ಮಿ ಸೋಲು ಅನುಭವಿಸುವ ಮೂಲಕ ನಿರಾಸೆ ಅನುಭವಿಸಿದ್ದಾರೆ.

2008ರಲ್ಲಿ ಬಿಎಸ್ ಯೂಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಲ್ಲಿ ಜನಾರ್ದನ ರೆಡ್ಡಿ ಪ್ರಮುಖ ಪಾತ್ರ ವಹಿಸಿದ್ದರು

 

Related