ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

ಕ್ಷೇತ್ರದಲ್ಲಿ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದೆ: ಡಿ.ಕೆ. ಸುರೇಶ್

ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ” ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು, ಸಾರ್ವಜನಿಕರು ಬಹಳ ಉತ್ಸಾಹದಿಂದ ನನಗೆ ಬೆಂಬಲ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಹಲವು ಕಾರ್ಯಕರ್ತರು ಆ ಪಕ್ಷಗಳನ್ನು ತೊರೆದು ನಮ್ಮ ಪಕ್ಷ ಸೇರುತ್ತಿದ್ದಾರೆ. ಇದರಿಂದಾಗಿ ನಮಗೆ ಮತ್ತಷ್ಟು ಶಕ್ತಿ ಹೆಚ್ಚಾಗಿದೆ” ಎಂದರು.

ನಾಳೆ 11 ಗಂಟೆಗೆ ನಾಮಪತ್ರ ಸಲ್ಲಿಕೆ:

“ನಾಳೆ ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರುಗಳಾದ ರಾಮಲಿಂಗಾ ರೆಡ್ಡಿ, ಗೃಹ ಸಚಿವರಾದ ಪರಮೇಶ್ವರ್ ಅವರು ಕೂಡ ಆಗಮಿಸಲಿದ್ದಾರೆ. ಅದೇ ರೀತಿ ಸಾರ್ವಜನಿಕರಿಗೂ ಆಹ್ವಾನ ನೀಡಿ, ನನಗೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.

 

Related