ಹಣದ ಬದಲು 10 ಕೆಜಿ ಅಕ್ಕಿ ಕೊಡಿ

ಹಣದ ಬದಲು 10 ಕೆಜಿ ಅಕ್ಕಿ ಕೊಡಿ

ತುಮಕೂರು: ಕಾಂಗ್ರೆಸ್ ಸರ್ಕಾರ ಚುನಾವಣೆಗು ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಈಗಾಗಲೇ ಹಲವು ಗ್ಯಾರೆಂಟಿಗಳನ್ನು ಜಾರಿ ಮಾಡಲಾಗಿದ್ದು, ಅದರಲ್ಲಿ ಅನ್ನ ಭಾಗ್ಯ ಯೋಜನೆ ಎಲ್ಲಾ ಬಡವರ್ಗದವರಿಗೆ ಸಹಾಯವಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರ 10 ಕೆಜಿ ಅಕ್ಕಿಯ ನೀಡುವುದಾಗಿ ಭರವಸೆಯನ್ನು ನೀಡಿತ್ತು. ಆದರೆ ಕೇಂದ್ರದಲ್ಲಿ ಅಕ್ಕಿ ಸಂಗ್ರಹವಿಲ್ಲದ ಕಾರಣ 5 ಕೆಜಿ ಅಕ್ಕಿ ಇನ್ನುಳಿದ 5 ಕೆಜಿ ಅಕ್ಕಿಯ ಬದಲು ಹಣ ರೂಪದಲ್ಲಿ ನೀಡಲಾಗುತ್ತಿದೆ.

ಇನ್ನು ಜಿಲ್ಲಾ ಉಸ್ತುವಾರಿ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಇಂದು (ಅ.31ಮಂಗಳವಾರ) ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಜನತಾ ನಡೆಸಿದರು. ಈ ವೇಳೆ ಓರ್ವ ರೈತ ನಮಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಿ ಎಂದು ಮನವಿ ಮಾಡಿದರು. ಕೇವಲ ಮೂರು ಕೆಜಿ ಕೊಡುತ್ತಾರೆ. ಹೊಟ್ಟೆ ತುಂಬ ಅನ್ನ ಊಟ ಮಾಡೋಕೆ ಆಗುತ್ತಿಲ್ಲ. ದಯವಿಟ್ಟು ನಮಗೆ ಹಣದ ಬದಲು 10 ಕೆಜಿ ಅಕ್ಕಿ ಕೊಡಿ. ಮಕ್ಕಳು ಮರಿ ಎಲ್ಲರು ಹೊಟ್ಟೆ ತುಂಬಾ ಊಟ ಮಾಡುತ್ತಾರೆ. ಇಲ್ಲದಿದ್ದರೆ ಹೊಟ್ಟೆ ಹಸಿವಿನಿಂದ ಇರಬೇಕಾಗುತ್ತೆ ಎಂದು ಅಂಗಲಾಚಿದರು.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹೆಚ್ಚುವರಿ ಐದು ಕೆಜೆ ಅಂದರೆ ಒಟ್ಟು 10 ಕೆಜಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದ್ದರು. ಆದರೆ ಅಧಿಕಾರಕ್ಕೆ ಬಂದ್​ ನಂತರ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ ಫಲಾನುಭವಿಗಳ ಅಕೌಂಟ್​ಗೆ ಐದು ಕೆಜಿ ಅಕ್ಕಿಯ ಹಣವನ್ನು ನೇರ ನಗದು ಪಾವತಿ (ಡಿಬಿಟಿ) ಮೂಲಕ ಪಾವತಿ ಮಾಡಲಾಗುತ್ತಿದೆ.

Related