ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ!

ಕೊರೋನಾ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿ!

ಬೆಂಗಳೂರು : ಕೊರೋನಾ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕತ್ಸೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಹೀಗಾಗಿ ಬಡವರಿಗೆ ಬೆಡ್ ಸಿಗುತ್ತಿಲ್ಲ. ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರಿ ಆಸ್ಪತ್ರೆಗಳು ಭರ್ತಿಯಾಗಿರುವುದರಿಂದಾಗಿ ಜನರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಸಾಕಷ್ಟು ಜನರಿಗೆ ಖಾಸಗಿ ಆಸ್ಪತ್ರೆಗಳ ವೆಚ್ಚವನ್ನು ಭರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ರೆಫರ್ ಮಾಡಲಾದ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

Related