ನನ್ನ ಅರ್ಜುನನ ಬದುಕಿಸಿಕೊಡಿ ಮಾವುತನ ಕಣ್ಣಿರು

  • In State
  • December 5, 2023
  • 107 Views
ನನ್ನ ಅರ್ಜುನನ ಬದುಕಿಸಿಕೊಡಿ ಮಾವುತನ ಕಣ್ಣಿರು

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಕಾಡಾನೆಗಳು ನಾಡಿಗೆ ಬಂದ ಕಾರಣ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಸುಮಾರು ಎಂಟು ವರ್ಷಗಳ ಕಾಲ ತಾಯಿ ಚಾಮುಂಡೇಶ್ವರಿಯ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದ ಆನೆ ಅರ್ಜುನನೂ ನೆನ್ನೆ ಕಾಡಾನೆ ಸೆರೆ ಕಾರ್ಯಾಚರಣೆಯಲ್ಲಿ ಮೃತಪಟ್ಟಿದೆ.

ಅರ್ಜುನ ಆನೆಯನ್ನು ಇಂದು ಅಂತಿಮ ದರ್ಶನಕ್ಕೆ ಇಡಲಾಗಿದ್ದು, ಕಳೆದ ಸುಮಾರು ವರ್ಷಗಳಿಂದ ಅರ್ಜುನನನ್ನು ಸಾಕಿ ಅದನ್ನು ಉಪಚಾರ ಮಾಡುತ್ತಿದ್ದ ಮಾವುತ ವಿನು, ನನ್ನ ಅರ್ಜುನನ್ನು ಬದುಕಿಸಿಕೊಡಿ ಎಂದು ಕಣ್ಣೀರು ಹಾಕುತ್ತಿದ್ದಾರೆ.

ವಿನು ಅರ್ಜುನ ಆನೆಯನ್ನ ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದು, ನನ್ನ ಆನೆಯನ್ನ ಬದುಕಿಸಿಕೊಡಿ.  ಇಲ್ಲದಿದ್ದರೇ ನನ್ನನ್ನೂ ಅರ್ಜುನನ ಜೊತೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ.

ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಮಾವುತ ಅರ್ಜುನನ ಎದುರು ರೋಧಿಸಿದ್ದಾರೆ.

ವಿನು ಅವರು ಅರ್ಜುನನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಇದೀಗ ಅರ್ಜುನನ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದೆ ರೋಧಿಸುತ್ತಿದ್ದಾರೆ. ಮಂಗಳವಾರ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚೇತರಿಸಿಕೊಂಡು ಬಂದಿದ್ದ ವಿನು ಅವರು ತನ್ನ ಪ್ರೀತಿಯ ಅರ್ಜುನನ್ನು ಕಂಡು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ.

 

Related