ಗೋದಾವರಿ ಪ್ರವಾಹ: 1000 ಕೋಟಿ ಪರಿಹಾರ ಕೇಳಿದ ತೆಲಂಗಾಣ

ಗೋದಾವರಿ ಪ್ರವಾಹ: 1000 ಕೋಟಿ ಪರಿಹಾರ ಕೇಳಿದ ತೆಲಂಗಾಣ

ಹೈದರಾಬಾದ್‌,ಜು 21: ತೆಲಂಗಾಣ ಸರ್ಕಾರವು ಗೋದಾವರಿ ನೀರಿನ ಪ್ರವಾಹ ಪರಿಹಾರದ ಭಾಗವಾಗಿ ತಕ್ಷಣದ ಸಹಾಯಕ್ಕಾಗಿ 1,000 ಕೋಟಿ ರೂಪಾಯಿಗಳನ್ನು ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದೆ.

ಇತ್ತೀಚೆಗೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ರಾಜ್ಯಕ್ಕೆ ಆಗಿರುವ ನಷ್ಟದ ಬಗ್ಗೆ ತೆಲಂಗಾಣ ರಾಜ್ಯ ಸರ್ಕಾರ ಕೇಂದ್ರಕ್ಕೆ ವರದಿ ಕಳುಹಿಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ, ಸರ್ಕಾರ ವಿವಿಧ ಇಲಾಖೆಗಳು ಸುಮಾರು 1,400 ಕೋಟಿ ರೂ.ಗಳಷ್ಟು ನಷ್ಟವನ್ನು ಅನುಭವಿಸಿವೆ. ಹೀಗಾಗಿ 1000 ಕೋಟಿ ತಕ್ಷಣದ ನೆರವು ನೀಡುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ಹಲವಾರು ರಸ್ತೆಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ರಾಜ್ಯ ರಸ್ತೆ ಇಲಾಖೆ 498 ಕೋಟಿ ನಷ್ಟ ಅನುಭವಿಸಿದೆ. ಪಂಚಾಯತ್ ರಾಜ್ ಇಲಾಖೆಯ ಅಂದಾಜು 449 ಕೋಟಿ ರೂ. ನಷ್ಟ ಅನುಭವಿಸಿದೆ. ಪೌರಾಡಳಿತ ಇಲಾಖೆಗೆ 379 ಕೋಟಿ ರೂ., ನೀರಾವರಿ ಇಲಾಖೆಗೆ 33 ಕೋಟಿ ರೂ., ವಿದ್ಯುತ್ ಇಲಾಖೆಗೆ 7 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಮನೆಗಳಿಗೆ ನೀರು ನುಗ್ಗಿ ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಿದ್ದರಿಂದ ಇನ್ನೂ 25 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಇಲಾಖೆಗಳಿಂದ ಪಡೆದ ಪ್ರಾಥಮಿಕ ಅಂದಾಜಿನ ಆಧಾರದ ಮೇಲೆ ರಾಜ್ಯ ಸರ್ಕಾರವು ನಷ್ಟದ ಬಗ್ಗೆ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದೆ. ಇದಕ್ಕೂ ಮುನ್ನ ಸೋಮವಾರ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರು ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಿ ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಜೀವ ಮತ್ತು ಜೀವನೋಪಾಯಕ್ಕೆ ಹಾನಿಯನ್ನುಂಟು ಮಾಡಿರುವ ಗೋದಾವರಿ ಪ್ರವಾಹದ ಬಗ್ಗೆ ಮಾಹಿತಿ ನೀಡಿದ್ದರು.

 

Related