ಬೆಂಗಳೂರು: ಬೆಂಗಳೂರು ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿಂದು ಕೃಷಿ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಸಹ ಕುಲಧಿಪತಿಯು ಅದ ಎನ್. ಚಲುವರಾಯಸ್ವಾಮಿಯವರು ಭಾಗವಹಿಸಿ, ಅತೀ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ಹಾಗು ಚಿನ್ನದ ಪದಕ ನೀಡಿ ಗೌರವಿಸಿದರು.
ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹಾಗೂ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಧಿಪತಿಯೂ ಆದ ಥ್ಯಾವರ್ ಚಂದ್ ಗೆಹ್ಲೋಟ್, ಉಪ ಕುಲಪತಿಗಳಾದ ಡಾ.ಸುರೇಶ್ ಸೇರಿದಂತೆ ವಿಶ್ವವಿದ್ಯಾನಿಲಯದ ನಾಮನಿರ್ದೇಶಿತ ಸದಸ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ
