ಮಾ.24ರೊಳಗೆ ಗೋಲಿಬಾರ್ ತನಿಖೆ ಪೂರ್ಣ

ಮಾ.24ರೊಳಗೆ ಗೋಲಿಬಾರ್ ತನಿಖೆ ಪೂರ್ಣ

ಬೆಂಗಳೂರು, ಫೆ. 25 : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಗೋಲಿಬಾರ್ಗೆ ಸಂಬಂಧಿಸಿದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಗತಿಯಲ್ಲಿದ್ದು, ಮಾ.24ರೊಳಗೆ ತನಿಖೆ ಪೂರ್ಣಗೊಳ್ಳಲಿದೆ ಎಂದು ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಪ್ರಕರಣದ ತನಿಖೆ ನಡೆಸಲು ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. ಅಡ್ವೋಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿ, ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಮ್ಯಾಜಿಸ್ಟ್ರೇಟ್ ತನಿಖೆ ಪ್ರಗತಿಯಲ್ಲಿದ್ದು, ಈವರೆಗೆ 74 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಮಾ.24ರೊಳಗೆ ತನಿಖೆ ಪೂರ್ಣಗೊಳ್ಳಲಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

Related