BMTC ಪ್ರಯಾಣಿಕರಿಗೆ ಗುಡ್ ನ್ಯೂಸ್

BMTC ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ದಸರಾ ಹಬ್ಬದ ಪ್ರಯುಕ್ತ ಬಿಎಂಟಿಸಿಯು ಜನರಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಹಿನ್ನಲೆ ಸತತವಾಗಿ ರಜೆ ಇರುವುದರಿಂದ ಪ್ರಯಾಣಿಕರ ಅನುಕೂಲ ಎಂದು ಬಿಎಂಟಿಸಿ ಬಸ್ ಬೆಂಗಳೂರು ಮಾತ್ರವಲ್ಲದೆ ಹೊರ ಜಿಲ್ಲೆಗೂ ಸಂಚರಿಸಲು ತೀರ್ಮಾನಿಸಿದೆ ಎಂದು ತಿಳಿದು ಬರುತ್ತಿದೆ.

ಅ. 23-24 ರಂದು ದಸರಾ ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಸಂಚಾರ ಮಾಡಲಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

ಇದರಿಂದ ಇಷ್ಟು ದಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್​ಗಳು, ಅ.21, 22, 23 ವರೆಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಮಾಡಲು ನಿರ್ಧಾರ ಮಾಡಿದೆ.

Related