ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್!

ಗೃಹಲಕ್ಷ್ಮಿಯರಿಗೆ ಗುಡ್‌ ನ್ಯೂಸ್!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಈಗಾಗಲೇ ಜಾರಿಗೆ ಬಂದಿದ್ದು, ಯೋಜನೆಯಲ್ಲಿ ಕೆಲವು ಗೃಹಲಕ್ಷ್ಮಿಯರಿಗೆ ಹಣ ಬರೆದಿದ್ದ ಕಾರಣ ಸ್ವತಃ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ

ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ ಹೀಗಾಗಿ ಮುಂದಿನ 15 ದಿನದೊಳಗೆ ಎಲ್ಲರ ಬ್ಯಾಂಕ್​​ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಬೆಂಗಳೂರು ಒನ್ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ. ಗೃಹಲಕ್ಷ್ಮೀ ‌ಯೋಜನೆಗೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಮಲ್ಲೇಶ್ವರಂ ಬೆಂಗಳೂರು ಒನ್ ಸೆಂಟರ್​ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆಯುತ್ತಿದ್ದಾರೆ.

 

Related