ರಾಜ್ಯದ ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್

ರಾಜ್ಯದ ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್

ಕಲಬುರಗಿ : ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ನೆರೆ ಸಂತ್ರಸ್ತರಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕೋಶದಿಂದ ನೀಡುವ ಪರಿಹಾರ ಮೊತ್ತ 5 ಪಟ್ಟು ಹೆಚ್ಚಳಕ್ಕೆ ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದ್ದು, ಮುಂದಿನ ದಿನಗಳಲ್ಲಿ ಪರಿಹಾರ ಹೆಚ್ಚಾಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್. ಅಶೋಕ್, ಸದ್ಯದ ಪರಿಸ್ಥಿತಿ ಎದುರಿಸಲು ಪ್ರವಾಹ ಪೀಡಿತ ಜಿಲ್ಲಾಡಾಳಿತಕ್ಕೆ 5 ಕೋಟಿ ರೂ. ನೀಡಲಾಗುವುದು ಎಂದು ಹೇಳಿದರು. ರಾಜ್ಯದಲ್ಲಿ 173 ತಾಲೂಕು ಪ್ರವಾಹ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ ಎಂದರು.

Related