ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.

ಇದೇ ತಿಂಗಳು ಮಾರ್ಚ್ 29ರಿಂದ ಏಪ್ರಿಲ್ 10ರ ವರೆಗೆ ನಡೆಯುತ್ತಿರುವ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ರಾಜ್ಯ ಸರ್ಕಾರ ಇದರ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದೆ.

ಸದರಿ ವಾರ್ಷಿಕ ಕಾರ್ಯಕ್ರಮದಡಿ ಅಡುಗೆ ಕೇಂದ್ರಗಳಿರುವ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಉಲ್ಲೇಖ – 1 ರ ಆದೇಶದಲ್ಲಿರುವಂತೆ SSLC ಪಬ್ಲಿಕ್ ಪರೀಕ್ಷೆಗಳು ದಿನಾಂಕ F 25.03.2024 ರಿಂದ ಪ್ರಾರಂಭಗೊಂಡು ದಿನಾಂಕ: 06.04.2024ರವರೆಗೆ ನಡೆಯಲಿದ್ದು ಈ ದಿನಾಂಕಗಳಂದು SSLC ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕಾರ್ಯಕ್ಕೆ ಯಾವುದೇ ಅಡಚಣೆಯಾಗದಂತೆ SSLC ವಾರ್ಷಿಕ ಪಬ್ಲಿಕ್ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟವನ್ನು ಸಿದ್ಧಪಡಿಸಿ ವಿತರಿಸುವಂತೆ ಆದೇಶಿಸಿದೆ .

ಈ ಬಗ್ಗೆ ಪರೀಕ್ಷಾ ಕೇಂದ್ರದ ಶಾಲಾ ಮುಖ್ಯಸ್ಥರಿಗೆ ಹಾಗೂ ಪರೀಕ್ಷಾ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಮತ್ತು ಮೇಲ್ವಿಚಾರಕ ಸಿಬ್ಬಂದಿಗಳಿಗೆ ಈ ಕಳಕಂಡ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದೆ.

 

Related