ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್‌ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರ ರೈತ ಬಾಂದವರಿಗೆ ಸಿಹಿಸುದ್ದಿ ನೀಡುವ ಸೂಚನೆಗಳು ಸಿಕ್ಕಿದ್ದು, ಈ ಬಗ್ಗೆ ವಿಧಾನ ಪರಿಷತ್‌ನಲ್ಲಿ ಚರ್ಚೆಗಳು ನಡೆದಿದೆ.

ಈ ವೇಳೆ ಮಾತನಾಡಿದ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ರೈತರ ಸಾಲ ಮನ್ನಾ ಯೋಜನೆಯಡಿ ಈವರೆಗೆ ಬಾಕಿ ಉಳಿದಿರುವ 57 ಸಾವಿರ ಅರ್ಜಿಗಳ ಸಂಬಂಧ 295 ಕೋಟಿ ರೂ. ಬಿಡುಗಡೆ ಮಾಡುವ ಪ್ರಕ್ರಿಯೆ ಚಾಲನೆಯಲ್ಲಿದೆ’ ಎಂದು ತಿಳಿಸಿದರು.

ಕಾಂಗ್ರೆಸ್‌ನ ಆರ್. ಧರ್ಮಸೇನಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಾಲ ಮನ್ನಾ ಯೋಜನೆಯಡಿ ಬಂದ ಅರ್ಜಿಗಳನ್ನು ಇತ್ಯರ್ಥ ಮಾಡಲಾಗುತ್ತಿದೆ ಎಂದು ಭರವಸೆ ನೀಡಿದರು.

Related