ಬಿಬಿಎಂಪಿ ಚುನಾವಣೆಗೆ ಸಿಕ್ತಾ ಗ್ರೀನ್ ಸಿಗ್ನಲ್..!?

ಬಿಬಿಎಂಪಿ ಚುನಾವಣೆಗೆ ಸಿಕ್ತಾ ಗ್ರೀನ್ ಸಿಗ್ನಲ್..!?

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಾವೋ ಮುಗಿಯುತ್ತಿದ್ದಂತೆ ಮತ್ತೆ ಇದೀಗ ಸ್ಥಳೀಯ ಚುನಾವಣೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿದ್ದು‌, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇದೀಗ ಬಿಬಿಎಂಪಿ ಚುನಾವಣೆಗೆ ಡಿಕೆ ಶಿವಕುಮಾರ್ ಅವರು ಸುಳಿವು ಕೊಟ್ಟಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಮತ್ತೆ ನಿರಾಸೆ

ಯೆಸ್… ಕಳೆದ ನಾಲ್ಕು ವರ್ಷಗಳ ಹಿಂದೆಯೇ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆ ಈಗ ಮುಹೂರ್ತ ಕೂಡಿ ಬಂದಿದೆ ಎಂಬ ಮಾಹಿತಿ ತಿಳಿದು ಬರುತ್ತಿದೆ. ಆದ್ದರಿಂದ ರಾಜ್ಯ ರಾಜಕಾರಣದಲ್ಲಿ ಮತ್ತೆ ಇದೀಗ ಬಿಬಿಎಂಪಿ ಚುನಾವಣೆ ಕಾವು ರಂಗೇರಲಿದೆ.

ಹೌದು, ಸದ್ಯ ಲೋಕಸಭೆ‌ ಚುನಾವಣೆ ಬಳಿಕ ರಾಜ್ಯ ಸರ್ಕಾರಕ್ಕೆ ಪಂಚಾಯತ್ ಚುನಾವಣೆ ಸೇರಿದಂತೆ ಬಿಬಿಎಂಪಿ ಚುನಾವಣೆ ನಡೆಸುವ ಉದ್ದೇಶವಿದೆ. ಇದಕ್ಕಾಗಿ‌ ಚುನಾವಣೆ ನಡೆಸಲು ಅಡ್ಡಿಯಾಗಿರುವ ಕಾನೂನು ಅಡೆ-ತಡೆಗಳನ್ನ ನಿವಾರಿಸಲು ಮುಂದಾಗಲಿದೆ. ಚುನಾವಣೆ ನಡೆಸುವ ಸಂಬಂಧ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಒಟ್ಟಾರೆ ಮೀಸಲಾತಿ ಪ್ರಮಾಣವನ್ನ ನಿರ್ಧರಿಸಿದ್ದರೂ ವಾರ್ಡ್ ವಾರು ಮೀಸಲು ನಿಗದಿಗೊಳಿಸಿರುವುದು ಬಾಕಿ ಇದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿ ಆಕ್ಷೇಪ ಆಹ್ವಾನಿಸಬೇಕಾಗಿದೆ. ಬರುವ ಆಕ್ಷೇಪ ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸುವುದು ಬಾಕಿ‌ ಇದೆ. ಇದಾದ ನಂತರ ಚುನಾವಣಾ ಆಯೋಗ‌ ಚುನಾವಣೆ ನಡೆಸಬೇಕಾಗುತ್ತದೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಎಚ್ಚರಿಕೆ‌ ಸಂದೇಶ ರವಾನಿಸಿದ್ದಾರೆ.

 

Related