ಜೂನ್ 1ಕ್ಕೆ ಸಿದ್ದು ಸರ್ಕಾರ 5 ಗ್ಯಾರಂಟಿಗಳ ಜಾರಿ?

ಜೂನ್ 1ಕ್ಕೆ ಸಿದ್ದು ಸರ್ಕಾರ 5 ಗ್ಯಾರಂಟಿಗಳ ಜಾರಿ?

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಚುನಾವಣೆಗು ಮೊದಲು ಕಾಂಗ್ರೆಸ್ ಪಕ್ಷವು ನೀಡಿರುವ ತನ 5 ಗ್ಯಾರಂಟಿಗಳನ್ನು ಪೂರೈಸಬೇಕೆಂದು ಪ್ರತಿಪಕ್ಷ ನಾಯಕರು ಹಾಗೂ ಸಾರ್ವಜನಿಕರು ಒತ್ತಾಯ ಮಾಡುತ್ತಿದ್ದಾರೆ.

ಹೌದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 15 ದಿನಗಳು ಕಳೆದಿದೆ. ಚುನಾವಣಾ ಪೂರ್ವ ಭರವಸೆ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕೆಂದು ಪ್ರತಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದರೆ ಇತ್ತ ಸಾರ್ವಜನಿಕರು ಕೂಡ ಒತ್ತಡ ಹಾಕುತ್ತಿದ್ದಾರೆ.

ಗ್ಯಾರಂಟಿ ಹೆಸರಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್, ಕೊನೆಗೂ ಯೋಜನೆ ಜಾರಿಗೆ ಮುಂದಾಗಿದೆ. ಜೂನ್ 1ರಂದು ಸಚಿವ ಸಂಪುಟ ಸಭೆ ನಡೆಸಿ ಅಂದೇ ಗ್ಯಾರಂಟಿ ಘೋಷಿಸುವ ನಿರೀಕ್ಷೆ ಇದೆ. ಗ್ಯಾರಂಟಿಗಳ ಜಾರಿ ಸಮಸ್ಯೆ ಬಗೆಹರಿಸಲು ವಿಶೇಷ ಸಮಿತಿ ರಚನೆಗೆ ಸರ್ಕಾರ ಮುಂದಾಗಿದೆ.

ಈ ಬಗ್ಗೆ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾತನಾಡಿದ್ದ ಡಿಸಿಎಂ ಡಿ ಕೆ ಶಿವಕುಮಾರ್, ಬಿಜೆಪಿಯವರು ಟೀಕೆ ಮಾಡಿದಷ್ಟೂ ನಮ್ಮ ಗ್ಯಾರಂಟಿಗಳಿಗೆ ಹೆಚ್ಚು ಪ್ರಚಾರ ಸಿಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಮಾರ್ಗಸೂಚಿ ಸಿದ್ಧಪಡಿಸಿಕೊಂಡು ಜೂನ್‌ 1ರಂದು ಸಚಿವ ಸಂಪುಟ ಸಭೆ ನಡೆಸುತ್ತೇವೆ. ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದ್ದಾರೆ.

 

Related