ಆನ್ ಲೈನ್  ಕ್ಲಾಸ್ ರದ್ದುಗೊಳಿಸಿದ ಸರ್ಕಾರ  

ಆನ್ ಲೈನ್  ಕ್ಲಾಸ್ ರದ್ದುಗೊಳಿಸಿದ ಸರ್ಕಾರ  

ಬೆಂಗಳೂರು : ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಆನ್ ಲೈನ್ ಶಿಕ್ಷಣದ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆನ್ ಲೈನ್ ಶಿಕ್ಷಣದ ಬಗ್ಗೆ ಗೊಂದಲ ಉಂಟಾಗಿತ್ತು. ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ ಕೆ ಜಿಯಿಂದ 5 ನೇ ತರಗತಿಯವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

 

Related