ಬೊಮ್ಮನಹಳ್ಳಿ: “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ

ಬೊಮ್ಮನಹಳ್ಳಿ: “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮ

ಕಾಂಗ್ರೆಸ್ ಸರ್ಕಾರ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಲೆಂದು ಕ್ಷೇತ್ರವಾರುಗಳಲ್ಲಿ “ಬಾಗಿಲಿಗೆ ಬಂದು ಸರ್ಕಾರ ಸೇವೆಗೆರಲಿ ಸಹಕಾರ” ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಇದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿ ಆ ಸಮಸ್ಯೆಗೆ ಸ್ಥಳದಲ್ಲಿ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಪಣತೊಟ್ಟಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಗರಿಕರ ಅಹವಾಲು/ಕುಂದು-ಕೊರತೆಗಳನ್ನು ಆಲಿಸುವ ಸಲುವಾಗಿ ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಬೊಮ್ಮನಹಳ್ಳಿ ವಲಯದ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ ಹಾಗೂ ಆನೇಕಲ್ ವಿಧಾನಸಭೆ ಕ್ಷೇತ್ರದ ಕೂಡ್ಲು ವಾರ್ಡ್ ಅನ್ನು ಒಟ್ಟುಗೂಡಿಸಿ ಹಮ್ಮಿಕೊಂಡಿರುವ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಗಿಡಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಬೊಮ್ಮನಹಳ್ಳಿ ವಲಯದಲ್ಲಿ ಬಾಗಿಲಿಗೆ ಬಂತು ಸರ್ಕಾರ ಸೇವೆಗಿರಲಿ ಸಹಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೊಮ್ಮನಹಳ್ಳಿ ವಲಯದಲ್ಲಿರುವ ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಿ ಅವರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ.

 

Related