ಸರ್ಕಾರಿ ಶಾಲಾ ಮಕ್ಕಳಿಗೆ ನಾಳೆಯಿಂದ ಸಿಗಲಿದೆ ಈ ಸೌಲಭ್ಯ

ಸರ್ಕಾರಿ ಶಾಲಾ ಮಕ್ಕಳಿಗೆ ನಾಳೆಯಿಂದ ಸಿಗಲಿದೆ ಈ ಸೌಲಭ್ಯ

ಶಿವಮೊಗ್ಗ: ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ನಾಳೆಯಿಂದ, ಫೆಬ್ರವರಿ 22 ರಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಈಗಾಗಲೇ ಶಿಕ್ಷಣ ಸಚಿವರು ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಇದಕ್ಕೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಇನ್ನು ಮುಂದೆ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನಗಳ ಕಾಲ ರಾಗಿ ಮಾಲ್ಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

 

Related