ರೈತರಿಗೆ ಸಿಹ ಸುದ್ದಿ ನೀಡಿದ ಸರ್ಕಾರ

ರೈತರಿಗೆ ಸಿಹ ಸುದ್ದಿ ನೀಡಿದ ಸರ್ಕಾರ

ಬೆಳಗಾವಿ: ರಾಜ್ಯದ ರೈತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿ ನೀಡಿದ್ದು, ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವ ಮತ್ತು ದೀರ್ಘಾವ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡಿದ ಅವರು, ರೈತರ ಸಾಲ ಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.

ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ ಎಂದು ಪ್ರಶ್ನಿಸಿದರು.

ಯಡಿಯೂರಪ್ಪನವರು 2019 ರ ಆಗಸ್ಟ್‍ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ ಎಂದು ಹೇಳಿದ್ದರು. ಇದೇ ರೀತಿ ಈ ಹಿಂದೆಯೂ ಹೇಳಿದ್ದರು ಎಂದು ಟೀಕಿಸಿದರು.

 

Related