ಸರ್ಕಾರಿ ನೌಕರರಿಗೆ ಕಹಿ ಸುದ್ದಿ!

ಸರ್ಕಾರಿ ನೌಕರರಿಗೆ ಕಹಿ ಸುದ್ದಿ!

ಬೆಂಗಳೂರು ಮೇ 06 : ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಕಲಿಕೆ ಕಡ್ಡಾಯಗೊಳಿಸಿ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಸೂಚನೆ ಹೊರಡಿಸಿದೆ.

ಈ ನಿಯಮಾವಳಿ ಪ್ರಕಾರ, ಸರ್ಕಾರಿ ನೌಕರರು ಇನ್ನುಮುಂದೆ ಕಂಪ್ಯೂಟರ್ ಪರೀಕ್ಷೆ ಪಾಸಾಗದಿದ್ದರೆ ಮುಂಬಡ್ತಿ, ವಾರ್ಷಿಕ ವೇತನ ಬಡ್ತಿ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈವರೆಗೆ ಅಸೂಚನೆ ಹೊರಡಿಸಿದ ೧೦ ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ನೀಡಿದ್ದ ಸರ್ಕಾರ, ಅದಕ್ಕಾಗಿ ೨೦೧೨ರಲ್ಲೇ ನಿಯಮ ಜಾರಿಗೊಳಿಸಿತ್ತು. ಈಗ ಮತ್ತೆ ತಿದ್ದುಪಡಿ ಮಾಡಿ ಎಲ್ಲಾ ಸರ್ಕಾರಿ ನೌಕರರು ೨೦೨೨ ಡಿಸೆಂಬರ್ ಅಂತ್ಯದೊಳಗೆ ಕಂಪ್ಯೂಟರ್ ಪರೀಕ್ಷೆ ಪಾಸ್ ಮಾಡಿಕೊಳ್ಳುವಂತೆ ಕಡ್ಡಾಯ ಮಾಡಿ ಗಡುವು ವಿಧಿಸಿದೆ.

 

Related