ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ 60% ಲಂಚ ಪಡೆದು ಲೂಟಿ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ. ನಮ್ಮ ಸರ್ಕಾರದ ಮೇಲೆ 40 ಪರ್ಸೆಂಟ್ ಲಂಚ ಆರೋಪ ಮಾಡಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದೂವರೆ ವರ್ಷದ ಒಳಗೆ 60% ಲಂಚ ಪಡೆದು ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಈ ಮಟ್ಟದ ಸುಳ್ಳು ಹೇಳೋದು ಪ್ರಧಾನಿ ಸ್ಥಾನಕ್ಕೆ ಅವಮಾನ: ಸಿಎಂ
40 ಪರ್ಸೆಂಟ್ ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ, 60% ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ಕರ್ನಾಟಕ ರಾಜ್ಯ ಮದ್ಯ ಮಾರಾಟಗಾರ ಸಂಘ ಬರೆದಿರುವ ಪತ್ರದಲ್ಲಿ 700 ಕೋಟಿ ರೂಪಾಯಿ ಲಂಚದ ಬಗ್ಗೆ ಆರೋಪ ಮಾಡಿದ್ದಾರೆ, ಈಗ ಖಾಸಗಿ ಕಂಪನಿಯೊಂದು 60 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿದೆ.
40% ಸರ್ಕಾರ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು, ಅಪಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ @INCKarnataka ಪಕ್ಷ, 60% ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ.
ನಗರಾಭಿವೃದ್ದಿ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಿಗೆ ಖಾಸಗಿ ಕಂಪನಿಯೊಂದು ಏಪ್ರಿಲ್ 22ರಂದು ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರದ 60% ಲಂಚಾವತಾರದ… pic.twitter.com/58nvcsJ1p7
— R. Ashoka (@RAshokaBJP) November 11, 2024