ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಇಡಿ ದೇಶಕ್ಕೆ ಮಾದರಿಯಾಗಬೇಕು: ಎಂ ಸತೀಶ್ ರೆಡ್ಡಿ

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಇಡಿ ದೇಶಕ್ಕೆ ಮಾದರಿಯಾಗಬೇಕು: ಎಂ ಸತೀಶ್ ರೆಡ್ಡಿ

ಬೆಂಗಳೂರು: ಬೊಮ್ಮನಹಳ್ಳಿ ವಿಧಾಸಭಾ ಕ್ಷೇತ್ರದ ಅರಕೆರೆ ವಾರ್ಡ್-193 ರಲ್ಲಿ ನ್ಯಾನಪ್ಪನಹಳ್ಳಿಯಲ್ಲಿ ವಿವೇಕ ಯೋಜನೆಯಡಿಯಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಾರ್ಥಮಿಕ ಶಾಲೆಯ ಕೊಠಡಿಯನ್ನು ಇಂದು (ಗುರುವಾರ ಜುಲೈ 04) ರಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಉದ್ಘಾಟನೆ ಮಾಡಿದರು.

ಶಾಲಾ ಕೊಠಡಿ ಉದ್ಘಾಟನೆ ಮಾಡಿ ನಂತರ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಇತ್ತೀಚಿಗೆ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕರ್ನಾಟಕ ರಾಜ್ಯಕ್ಕೆ ಪ್ರಥಮ ಸ್ಥಾನಪಡೆದು ಇಡೀ  ರಾಜ್ಯಕ್ಕೆ ಉತ್ತಮ ಹೆಸರನ್ನು ಗಳಿಸುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆಯಲ್ಲಿ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕೆಂದು ಹೇಳಿದರು.

ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಇಡಿ ದೇಶಕ್ಕೆ ಮಾದರಿಯಾಗಬೇಕು ಹಾಗಾಗಿ ವಿದ್ಯಾಭ್ಯಾಸದ ಕಡೆ ಹೆಚ್ಚು ಒತ್ತು ನೀಡಬೇಕೆಂದು ವಿದ್ಯಾರ್ಥಿಗಳಿಗೆ ಶಾಸಕ ಎಂ ಸತೀಶ್ ರೆಡ್ಡಿ ಅವರು ಕಿವಿಮಾತು ಹೇಳಿದರು. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿಯೇ ಸಾವಿರಾರು ಕೋಟಿ ಅಕ್ರಮ: ಸಿಟಿ ರವಿ

ನಾಗಪ್ಪನಹಳ್ಳಿ ಭಾಗದ ಮಕ್ಕಳಿಗೆ ಈ ಶಾಲೆಯಿಂದ ಬಹಳಷ್ಟು ಉಪಯೋಗವಾಗುತ್ತದೆ ಆದ್ದರಿಂದ ಎಲ್ಲಾ ಮಕ್ಕಳು ಸರ್ಕಾರಿ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ನಿಮ್ಮ ಮುಂದಿನ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಮುರಳಿ, ಬಿಜೆಪಿ ವಾರ್ಡ್ ಅಧ್ಯಕ್ಷರಾದ ಮಂಜುನಾಥ, ಸ್ಥಳೀಯ ಮುಖಂಡರು ಹಾಗೂ ಶಾಲಾ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

 

 

Related