ಮೈಸೂರು ದಸರಾ; ಗಜಪಡೆಗೆ ಅದ್ದೂರಿ ಸ್ವಾಗತ

ಮೈಸೂರು ದಸರಾ; ಗಜಪಡೆಗೆ ಅದ್ದೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ದಸರಾ ಹಬ್ಬಕ್ಕೆ ಇನ್ನೇನು ದಿನಗಳನೇ ಬಾಕಿ ಇದು, ನಾಡ ಹಬ್ಬಕ್ಕೆ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆಗೆ ಅದ್ದೂರಿ ಪೂಜೆ ನೆರವೇರಿಸಲಾಯಿತು.

ಹೌದು, ಈ ಬಾರಿ ನಡೆಯಲಿರುವ ದಸರಾ ಮಹೋತ್ಸವಕ್ಕೆ ಭಾಗವಹಿಸಲು ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು ಶುಕ್ರವಾರ ಆನೆಗಳಿಗೆ ಸಾಂಪ್ರದಾಯಕವಾಗಿ ಪೂಜೆ ನೆರವೇರಿಸಲಾಯಿತು. ಶುಕ್ರವಾರ ಬೆಳಗ್ಗೆ 10.10ರ ತುಲಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಸ್ವಾಗತ ಕೋರಲಾಯಿತು. ಇದನ್ನೂ ಓದಿ: ಉಕ್ರೇನ್​ಗೆ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಭೇಟಿ!

ಅಶೋಕಪುರಂನಲ್ಲಿರುವ ಅರಣ್ಯ ಭವನದಿಂದ ಅರಮನೆಯ ಜಯಮಾರ್ತಾಂಡ ದ್ವಾರಕ್ಕೆ ಅಂಬಾರಿ ಆನೆ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಆಗಮಿಸಿದವು. ಇವುಗಳಿಗೆ ಅರ್ಚಕ ಪ್ರಹ್ಲಾದ್ ರಾವ್ ಪೂಜೆ ಸಲ್ಲಿಸಿದರು. ಬಳಿಕ ಶಾಸಕರಾದ ಟಿ.ಎಸ್.ಶ್ರೀವತ್ಸ, ಕೆ.ಹರೀಶ್ ಗೌಡ, ತನ್ವೀರ್ ಸೇಠ್ ಅವರು ಪುಷ್ಪಾರ್ಚನೆ ಮಾಡಿ, ಅರಮನೆ ಆವರಣಕ್ಕೆ ಆನೆಗಳನ್ನು ಬರ ಮಾಡಿಕೊಂಡರು. ದಸರಾ ಆನೆಗಳು ಅರಮನೆ ಆವರಣ ಪ್ರವೇಶಿಸುತ್ತಿದ್ದಂತೆ ಸಿಎಆರ್ ಪೊಲೀಸರು ಗೌರವ ರಕ್ಷೆ ಸಲ್ಲಿಸಿದರು.

ನಂತರ ಆನೆಗಳು ಅರಮನೆಯ ಮುಂಭಾಗದ ಆನೆ ಬಾಗಿಲಿಗೆ ಆಗಮಿಸಿದವು. ಇಲ್ಲಿ ಆನೆಗಳನ್ನು ಪೂರ್ವ ದಿಕ್ಕಿಗೆ ಸಾಲಾಗಿ ನಿಲ್ಲಿಸಿ, ವೇದ ಘೋಷಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ಸಿಎಆರ್ ಪೊಲೀಸರು ಗೌರವ ರಕ್ಷೆ ಸಲ್ಲಿಸಿದರು.

ಅದೇನೇ ಆಗಲಿ ಮೈಸೂರು ದಸರಾದಲ್ಲಿ ಆನೆಗಳು ಗಾಂಭೀರ್ಯದಿಂದ ಹೆಜ್ಜೆ ಹಾಕುವುದನ್ನು ನೋಡಲು ಎರಡು ಕಣ್ಣು ಸಾಲದು.

Related