ಬರ ಪರಿಹಾರಕ್ಕೆ ಸಿಕ್ತು ಗ್ರೀನ್ ಸಿಗ್ನಲ್

ಬರ ಪರಿಹಾರಕ್ಕೆ ಸಿಕ್ತು ಗ್ರೀನ್ ಸಿಗ್ನಲ್

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ವಿಪರೀತ ಬರಗಾಲ ಕಾಡುತ್ತಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಕೂಡ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡದಿದ್ದ ಕಾರಣ ರಾಜ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿತು ಈ ಅರ್ಜಿಗೆ ಇಂದು ಏಪ್ರಿಲ್ 22 ಸುಪ್ರೀಂಕೋರ್ಟ್ ಅಸ್ತು ಎಂದಿದೆ.

ಹೌದು ,ಏಪ್ರಿಲ್ 29 ರ ಒಳಗಾಗಿ ಕರ್ನಾಟಕ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇನ್ನು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಕಳೆದ ಸಪ್ಟಂಬರ್ 2023ರಲ್ಲಿ ನಾವು ರಾಜ್ಯದ ಪರಿಹಾರದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದೆವು, ಆ ಹೋರಾಟದ ಪ್ರತಿಫಲ ನಮಗಿಂದು ದೊರಕಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ

ಏಪ್ರಿಲ್ 29ರೊಳಗೆ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್​​​​ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರಕಾರದ ಪರ ವಕೀಲರು ಕೇಳಿಕೊಂಡ‌ರು. ವಾದ-ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್​ 29ಕ್ಕೆ ಮುಂದೂಡಿತು.

Related