ಗೃಹಲಕ್ಷ್ಮಿ ಯೋಜನೆ: ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ಗೃಹಲಕ್ಷ್ಮಿ ಯೋಜನೆ: ನಾಳೆಯಿಂದಲೇ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆಯ ಮುನ್ನ 5 ಗ್ಯಾರಂಟಿಗಳನ್ನು ಘೋಷಿಸಿದ್ದು ಈಗಾಗಲೇ ಮಹಿಳೆಯರಿಗೆ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಮಾಡಲಾಗಿದೆ.

ಇನ್ನು ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿಯನ್ನು ಸ್ವೀಕರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಘೋಷಣೆ ಮಾಡಿದ್ದಾರೆ.

ಹೌದು, ಮನೆ ಯಜಮಾನಿಗೆ 2000 ರೂ ನೀಡುವ ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅಂದರೆ ಜೂನ್ 16ರಿಂದ ಆನ್​ಲೈನ್, ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಘೋಷಣೆ ಮಾಡಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಪಿಎಲ್, ಅಂತ್ಯೋದಯ ಕಾರ್ಡ್​ದಾರರು  ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್​, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆ ಆಧಾರ್ ಕಾರ್ಡ್, ಪತಿ ಆಧಾರ್ ಕಾರ್ಡ್​ ಮಾಹಿತಿ ನೀಡಬೇಕು. ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಸಲು ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

 

Related