ಗ್ರಾ.ಪಂ ಸದಸ್ಯರೇ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ

ಗ್ರಾ.ಪಂ ಸದಸ್ಯರೇ, ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ

ಹಾನಗಲ್ :  ಪಂಚಾಯತ್ ವ್ಯವಸ್ಥೆಯಲ್ಲಿ ಜನ ಸೇವೆಗೆ ಸಲ್ಲಬೇಕಾದ ಪ್ರಾಮಾಣಿಕ ಸೇವೆ ಗ್ರಾಮ ಪಂಚಾಯತ್ ಸದಸ್ಯರಿಂದ ಆಗಬೇಕಾಗಿದ್ದು, ಗ್ರಾಮೀಣಾಭಿವೃದ್ಧಿಯ ಕನಸನ್ನು ನನಸು ಮಾಡುವ ಹೊಣೆ ಅವರ ಮೇಲಿದೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ತಿಳಿಸಿದರು.

ಹಾನಗಲ್ಲಿನ ನೂರಾನಿ ಹಾಲ್‌ನಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ ನೂತನ ಗ್ರಾಪಂ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾ.ಪಂ ಚುನಾವಣೆಯಲ್ಲಿ ಬಹುಪಾಲು ಮಹಿಳೆಯರು ಆಯ್ಕೆಯಾಗಿದ್ದಾರೆ. ಅವರು ಮನಸ್ಸು ಮಾಡಿದರೆ ಮಾದರಿ ಗ್ರಾ.ಪಂ  ಆಡಳಿತ ನಡೆಸಲು ಸಾಧ್ಯ. ಕಾಂಗ್ರೆಸ್ ಪಕ್ಷದ ಹಲವರು ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ.

ಅವರಿಗೆ ಮುಂದೆ ಒಳ್ಳೆಯ ಭವಿಷ್ಯವಿದೆ. ಪಕ್ಷನಿಷ್ಠೆ ತೋರಿ ಕೆಲಸ ಮಾಡಿದ ಎಲ್ಲರೂ ಅಭಿನಂದನಾರ್ಹರು. ಮತದಾರರ ಕುಂದುಕೊರತೆಗಳಿಗೆ ಸ್ಪಂದಿಸುವುದೇ ನಮ್ಮ ಮೊದಲ ಆದ್ಯತೆಯಾಗಬೇಕು. ಪಂಚಾಯತ್ ವ್ಯವಸ್ಥೆಯನ್ನು ಬಲಪಡಿಸಬೇಕು. ಸೋತವರು ಗೆದ್ದವರು ಎನ್ನದೇ ಕಾಂಗ್ರೆಸ್ ಪಕ್ಷ ಎಲ್ಲರೂ ಒಟ್ಟಾಗಿ ತಾಲೂಕಿನ ಹಿತಕ್ಕೆ ಶ್ರಮಿಸೋಣ ಎಂದರು. ತಾಲೂಕಿನಲ್ಲಿ ಗ್ರಾ.ಪಂಗೆ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಎಲ್ಲ ಸದಸ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ರಾಜೇಶ್ವರ ಕಲ್ಲೇರ, ತಾಲೂಕು ಪಂಚಾಯತ್ ಅಧ್ಯಕ್ಷ ಸಿದ್ದನಗೌಡ ಪಾಟೀಲ, ಉಪಾಧ್ಯಕ್ಷೆ ಸುಮಂಗಲಾ ಕನ್ನಕ್ಕನವರ, ಟಾಕನಗೌಡ ಪಾಟೀಲ, ಯಾಸಿರಖಾನ ಪಠಾಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ರಂಗನಗೌಡ ಪಾಟೀಲ, ಪುಟ್ಟಪ್ಪ ನರೇಗಲ್ಲ, ಪುರಸಭೆ ಅಧ್ಯಕ್ಷ ಖುರ್ಷಿದ ಹುಲ್ಲತ್ತಿ, ಉಪಾಧ್ಯಕ್ಷ ಮಹೇಶ ಪವಾಡಿ, ಮಾಜಿ ತಾಪಂ ಅಧ್ಯಕ್ಷ ಶಿವಬಸಪ್ಪ ಪೂಜಾರ, ರಾಜು ಗುಡಿ, ಮಹದೇವಪ್ಪ ಬಾಗಸರ, ರಾಮು ಯಳ್ಳೂರ, ಬಸವರಾಜ ಹಾದಿಮನಿ, ನಾಗರಾಜ ಕ್ಯಾಬಳ್ಳಿ, ಫಯಾಜ ಲೋಹಾರ, ಭರಮಣ್ಣ ಶಿವೂರ, ಮಧು ಪಾಣಿಗಟ್ಟಿ, ಉಮೇಶ ಮಾಳಗಿ ಮೊದಲಾದವರಿದ್ದರು.

Related