ಕೊಪ್ಪಳ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕೋಟ್ಯಂತರ ಜನರು ನೆಮ್ಮದಿಯ ನಿಟ್ಟಿಸಿರು ಬಿಡುತ್ತಿದ್ದಾರೆ ಎಂದು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡವರ ಬಡತನ ನೀಗಿದೆ ಮತ್ತು ಬಡವರು ಸಹ ಸಂಭ್ರಮದಿಂದ ಹಬ್ಬ ಮಾಡುವಂತಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಚುನಾವಣೆಗೆ ಮುನ್ನ ಘೋಷಣೆ ಮಾಡಿದ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ.
ಕೋಟ್ಯಂತರ ಬಡವರು ನೆಮ್ಮದಿಯ ನಿಟ್ಟುಸಿರುಬಿಟ್ಟಿದ್ದಾರೆ. ಕುಟುಂಬದ ಒಡತಿಗೆ ಗೃಹ ಲಕ್ಷ್ಮಿ, ಮನೆ ಬೆಳಗಲು ಗೃಹಜ್ಯೋತಿ, ಬಸ್ಸಿನಲ್ಲಿ ಉಚಿತವಾಗಿ ಓಡಾಡಲು ಶಕ್ತಿ ಯೋಜನೆ, ಅನ್ನಭಾಗ್ಯ ಹಾಗೂ ಯುವ ನಿಧಿಯನ್ನು ಜಾರಿ ಮಾಡುವ ಮೂಲಕ ಪ್ರತಿ ಕುಟುಂಬಕ್ಕೂ ನಿಗದಿತ ಆದಾಯ ಬರುವಂತೆ ಆಗಿದೆ ಎಂದರು. ಆದರೆ, ಇದನ್ನು ಸಹಿಸಿಕೊಳ್ಳಲು ಆಗದ ಬಿಜೆಪಿಯವರು ರಾಜ್ಯ ದಿವಾಳಿಯಾಗುತ್ತದೆ ಎಂದು ಬೊಬ್ಬೆ ಹೊಡೆದರು ಎಂದು ಕಿಡಿಕಾರಿದರು.