ಗುಂಡ್ಲುಪೇಟೆ ಪುರಸಭೆ ಆಡಳಿತ ಕಾಂಗ್ರೆಸ್‌ ವಶಕ್ಕೆ ..!

ಗುಂಡ್ಲುಪೇಟೆ ಪುರಸಭೆ ಆಡಳಿತ ಕಾಂಗ್ರೆಸ್‌ ವಶಕ್ಕೆ ..!

ಗುಂಡ್ಲುಪೇಟೆ: ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಟ್ಟಣ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಇಲ್ಲದಿದ್ದರೂ ಚುನಾವಣಾ ತಂತ್ರಗಾರಿಕೆಯ ಮೂಲಕ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ.

ಪಟ್ಟಣ ಪುರಸಭಾ ಸಭಾಂಗಣದಲ್ಲಿ ಬದುವಾರ ಎರಡನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್.ಕಿರಣ್‌ ಗೌಡ ನಾಮಪತ್ರ ಸಲ್ಲಿಸಿದ್ದು, ಉಳಿದಂತೆ ಬಿಜೆಪಿ ಪಕ್ಷದ ವತಿಯಿಂದ ಯಾರು ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿಗಳು ಪಟ್ಟಣ ಪುರಸಭೆಯ ನೂತನ ಅಧ್ಯಕ್ಷರಾಗಿ ಜಿ.ಎಸ್.ಕಿರಣ್ ರವರ ಅವಿರೋಧ ಆಯ್ಕೆ ಘೋಷಿಸಿದರು. ಇದನ್ನೂ ಓದಿ: ಅಂತರರಾಷ್ಟ್ರೀಯ 3 ದರೋಡೆಕೋರರ ಬಂಧನ

ಅದೇ ರೀತಿ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ ಪಕ್ಷದ ವತಿಯಿಂದ ಹೀನಾ ಕೌಸರ್ ಹಾಗೂ ಬಿಜೆಪಿ ವತಿಯಿಂದ ಎಸ್.ಕುಮಾರ್ ನಾಮಪತ್ರ ಸಲ್ಲಿಸಿದರು, ಬಿಜೆಪಿ ಪಕ್ಷದ ಅಭ್ಯರ್ಥಿಗೆ ಸದಸ್ಯರು ಕ್ಯರು ಗಳ ಬಹುಮತ ಇಲ್ಲದ ಕಾರಣ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಹೀನಾಕೌಸರ್ ರವರ ಆಯ್ಕೆಯನ್ನು ಚುನಾವಣಾ ಅಧಿಕಾರಿ ರಮೇಶ್ ಬಾಬು ರವರು ಘೋಷಿಸಿದರು.

Related