ದೌರ್ಜನ್ಯ ಕಾಯ್ದೆ ಅನುಷ್ಟಾನಕ್ಕೆ ಹೈ ಸೂಚನೆ

ದೌರ್ಜನ್ಯ ಕಾಯ್ದೆ ಅನುಷ್ಟಾನಕ್ಕೆ ಹೈ ಸೂಚನೆ

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ 1995 ರ ದೌರ್ಜನ್ಯ ತಡೆ ಕಾಯ್ದೆ ನಿಯಮವನ್ನು ಅನುಷ್ಠಾನಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸಮಿತಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ನಟರಾಜ್ ರಂಗಸ್ವಾಮಿ ಅವರನ್ನೊಳಗೊಂಡ ವಿಭಾಗೀಯ ಪೀಠ ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ನಾಗರಿಕ ಹತ್ತು ನಿರ್ದೇಶನಾಲಯಗಳಿಗೆ ನೋಟೀಸ್ ನೀಡಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಳ ಕಾಯ್ದೆಯನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಅರ್ಜಿದಾರರು ದೂರಿದ್ದರು. ಕಾಯ್ದೆಯನ್ನು ಅನುಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯವಾಗಿದೆ, ಅದನ್ನು ದೃಢ ಮನಸ್ಸಿನಿಂದ ಜಾರಿಗೆ ತರಬೇಕು ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

Related