ಫಲಿತಾಂಶಕ್ಕೂ ಮುನ್ನ ಚಾಮುಂಡೇಶ್ವರಿ ಮೊರೆ ಹೋದ ಎಚ್.ಕುಸುಮಾ

ಫಲಿತಾಂಶಕ್ಕೂ ಮುನ್ನ ಚಾಮುಂಡೇಶ್ವರಿ ಮೊರೆ ಹೋದ ಎಚ್.ಕುಸುಮಾ

ಮೈಸೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಎಲ್ಲರ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಎಚ್.ಕುಸುಮಾ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಉಪ ಸಮರದ ಫಲಿತಾಂಶಕ್ಕೂ ಮುನ್ನ ಚಾಮುಂಡೇಶ್ವರಿ ಸನ್ನಿಧಿಗೆ ಬಂದಿರುವ ಕುಸುಮ, ತಂದೆ ಹನುಮಂತಪ್ಪ ಅವರ ಜೊತೆಗೂಡಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದರು. ಕುಸುಮಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.

ಆರ್.ಆರ್ ನಗರ ಉಪಚುನಾವಣೆ ಫಲಿತಾಂಶಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದು, ಪೂಜೆ ಸಲ್ಲಿಸಿದರು. ಆ ಬಳಿಕ ಮಾತನಾಡಿ, ನನಗೆ ಗೆಲ್ಲುವ ಆತ್ಮವಿಶ್ವಾಸ ಇದೆ. ಶೇಕಡವಾರು ಕಡಿಮೆ ಆಯಿತು ಎಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ ಎಂದು ತಿಳಿಸಿದರು.

Related