ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ

ಫೆಬ್ರವರಿ ತಿಂಗಳಲ್ಲಿ ಹಂಪಿ ಉತ್ಸವ

ಬೆಂಗಳೂರು: 2024ನೆಯ ಸಾಲಿನ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಈ ಬಾರಿ ಅತಿ ವಿಜ್ರಂಭಣೆಯಿಂದ ಚಾಲನೆ ನೀಡಲಾಗುವುದು ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರು ಜಮೀರ್ ಅಹ್ಮದ್ ಅವರು ತಿಳಿಸಿದ್ದಾರೆ.

ಹೌದು, ನಮ್ಮ ಕರ್ನಾಟಕದ ಹೆಮ್ಮೆ ಹಂಪಿಯ ಉತ್ಸವವನ್ನು ಈ ಬಾರಿ ವಿಶೇಷ ಮತ್ತು ಅತಿ ವಿಜ್ರಂಭಣೆಯಿಂದ ಆಚರಿಸಲಾಗುವುದೆಂದು ತಿಳಿದು ಬಂದಿದೆ. ಇನ್ನು ಹಂಪಿ ಉತ್ಸವವನ್ನು 2024 ಫೆಬ್ರವರಿ ಎರಡನೆಯ ತಾರೀಖಿನಿಂದ ಮೂರು ದಿನಗಳವರೆಗೆ ಈ ಉತ್ಸವವನ್ನು ಜರುಗಲಿದ್ದು, ಈ ಉತ್ಸವದಲ್ಲಿ ಈ ಬಾರಿ ವಿಶೇಷ ಎಂದರೆ ಸ್ಥಳೀಯ ಕಲಾ ಕೃತಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ತಿಳಿದುಬಂದಿದೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ. ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.

Related