ಅಧಿಕಾರಿಗಳಿಗೆ ಕೈ ಬೊಮ್ಮಾಯಿ

ಅಧಿಕಾರಿಗಳಿಗೆ ಕೈ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ 2023ನೇ ಚುನಾವಣೆಯಲ್ಲಿ ಹೀನಾಯ ಸೋಲನ್ನು ಕಂಡಿದ್ದು, ಹಂಗಾಮಿ ಸಿಎಂ ಬಸವರಾಜ್ ಬೊಮ್ಮಾಯಿ ಯವರು ಇಂದು ತಮ್ಮ ಕೊನೆಯ ಸಭೆಯನ್ನು ಕರೆದು ಹಿರಿಯ ನಾಯಕರೊಂದಿಗೆ ಸಭೆಯನ್ನು ನಡೆಸಿದ್ದರು.

ಹೌದು,ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲುಕಂಡಿದೆ. ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಿಎಂ ಸ್ಥಾನಕ್ಕೆ ಮೊನ್ನೇ ಅಷ್ಟೇ ರಾಜೀನಾಮೆ ನೀಡಿದ್ದರು. ಇದೀಗ ಹಂಗಾಮಿ ಸಿಎಂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಇಂದು ಹಿರಿಯ ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಸಿದರು. ಕೊನೆ ಸಭೆಯಲ್ಲಿ ಎಲ್ಲಾ ಅಧಿಕಾರಿಗಳಿಗೆ ಕೈ ಮುಗಿದು ಧನ್ಯವಾದ ಹೇಳಿದ್ದಾರೆ.

ರಾಜ್ಯ ವಿಧಾನಭೆ ಚುನಾವಣೆ ಫಲಿತಾಂಶದ ಬಳಿಕ ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿರು.

ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದ್ದಾರೆ.

ಕೋವಿಡ್, ಪ್ರವಾಹ ಸಂದರ್ಭದಲ್ಲಿ ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿರುವ ಬಗ್ಗೆ ಮಾತನಾಡಿದರು.

ಇನ್ನು ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವು ಐಎಎಸ್, ಐಪಿಎಸ್​ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Related