ಡಿಕೆಶಿ ಗೆ 63ನೇ ಹುಟ್ಟುಹಬ್ಬದ ಸಂಭ್ರಮ

ಡಿಕೆಶಿ ಗೆ 63ನೇ ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆದ್ದು ತನ್ನ ನಗೆಯನ್ನು ಬೀರುತ್ತಿದೆ. ಇನ್ನು ಇದರ ಮಧ್ಯೆ ಸಿಎಂ ಕುರ್ಚಿಗೆ ಪೈಪೋಟಿ ನಡೆದಿದ್ದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರ ನಡುವೆ ಸಿಎಂ ಪೈಪೋಟಿ ನಡೆದಿದೆ.

ಇದರ ಮಧ್ಯೆ ಇಂದು ಡಿಕೆ ಶಿವಕುಮಾರ್ ಅವರ 63ನೇ ಹುಟ್ಟುಹಬ್ಬ, ಕಾಂಗ್ರೆಸ್ ನಾಯಕರು ಮತ್ತು ಅಭಿಮಾನಿಗಳು ಡಬಲ್ ಖುಷಿಯಲ್ಲಿ ತೇಲಾಡುತ್ತಿದ್ದಾರೆ.

ಹೌದು, ಕರ್ನಾಟಕ ಚುನಾವಣಾ ಕುರುಕ್ಷೇತ್ರದಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಅದ್ವಿತೀಯವಾಗಿ ಹೊರಹೊಮ್ಮಿದೆ.

ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ ಉಭಯ ನಾಯಕರು ಈಗ ಸಿಎಂ ಕುರ್ಚಿಗೆ ಪಟ್ಟು ಬಿಗಿಗೊಳಿಸಿದ್ದಾರೆ.

ರಾಜಕೀಯ ಬಿಗಿ ಪರಿಸ್ಥಿತಿ ನಡುವೆ ಇಂದು ಕೆಪಿಸಿಸಿ ಸಾರಥಿ, ಕನಕಪುರ ಬಂಡೆ ಡಿ ಕೆ ಶಿವಕುಮಾರ್ ಹುಟ್ಟುಹಬ್ಬ. ಪಕ್ಷದ ನಾಯಕರು, ಕಾರ್ಯಕರ್ತರು, ಡಿ ಕೆ ಶಿವಕುಮಾರ್ ಅಭಿಮಾನಿಗಳು ಈ ಬಾರಿ ಕಾಂಗ್ರೆಸ್ ಗೆದ್ದ ಖುಷಿಯಲ್ಲಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸದ ಹೊರಗೆ, ಅರಮನೆ ಮೈದಾನ ರಸ್ತೆಯ ಬದಿಯಲ್ಲಿ ಡಿ ಕೆ ಶಿವಕುಮಾರ್ ಫೋಟೋ, ಕಟೌಟ್ ಗಳು ರಾರಾಜಿಸುತ್ತಿವೆ.

 

Related