ನಿಯಮ ಉಲ್ಲಂಘನೆ ಮಾಡಿದ್ರಾ ಸಚಿವೆ ಹೆಬ್ಬಾಳ್ಕರ್..?

ನಿಯಮ ಉಲ್ಲಂಘನೆ ಮಾಡಿದ್ರಾ ಸಚಿವೆ ಹೆಬ್ಬಾಳ್ಕರ್..?

ಬೆಳಗಾವಿ: ಚುನಾವಣೆ ಅಧಿಸೂಚನೆ ಹೊರಡಿಸಿದ ಮೇಲೆ ರಾಜಕೀಯ ವ್ಯಕ್ತಿಗಳು ಸಭೆ, ಸಮಾರಂಭ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಬಾರದೆಂದು ಈಗಾಗಲೇ ನಮಗೆಲ್ಲರೂ ಗೊತ್ತಿರುವ ಸಂಗತಿ.

ಆದರೆ ಚುನಾವಣೆಯ ಅಧಿಸೂಚನೆ ಬಂದರೂ ಕೂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಆಗಿರುವಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಂಗನವಾಡಿ ಕಾರ್ಯಕರ್ತರ ಜೊತೆ ಸಭೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಎಫ್ಐಆರ್ ದಾಖಲಾಗುವುದು ಎಂದು ಹೇಳಲಾಗುತ್ತಿದೆ.

ಬೆಳಗಾವಿಯ ಕುವೆಂಪು ನಗರದಲ್ಲಿರುವ ಗೃಹ ಕಚೇರಿಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಕರೆಸಿಕೊಂಡು ಸಚಿವೆ ಸಭೆ ನಡೆಸಿದ್ದಾರೆಂದ ಹೇಳಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಚುನಾವಣಾ ಅಧಿಕಾರಿಗಳು, ಪ್ಲೇಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆದ ಬಗ್ಗೆ ಸಾಕ್ಷಿಗಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಸಭೆ ಆಯೋಜಿಸಿದ್ದರ ವಿರುದ್ಧ ಕ್ರಮ ಕೈಗೊಳ್ಳಳಾಗುವುದು ಎಂದು ಹೇಳಿದ್ದಾರೆ.

 

Related