ಹತ್ರಾಸ್ ಕಾಲ್ತುಳಿತ; ಸಾವಿನ ಸಂಖ್ಯೆ 121 ಕ್ಕೆ ಏರಿಕೆ

ಹತ್ರಾಸ್ ಕಾಲ್ತುಳಿತ; ಸಾವಿನ ಸಂಖ್ಯೆ 121 ಕ್ಕೆ ಏರಿಕೆ

ಹತ್ರಾಸ್: ಹತ್ರಾಸ್ ನ ಧಾರ್ಮಿಕ ಸಭೆಯಲ್ಲಿ ನಡೆದ ಭೀಕರ ಕಾಲ್ತುಳಿತದ ನಂತರ ಸಾವಿನ ಸಂಖ್ಯೆ ಇದೀಗ 121 ಕ್ಕೆ ತಲುಪಿದೆ. ಹತ್ರಾಸ್ ನಲ್ಲಿ ಸತ್ಸಂಗವನ್ನು ಆಯೋಜಿಸಿದ್ದ ‘ಭೋಲೆ ಬಾಬಾ’ ಅವರನ್ನು ಹುಡುಕಲು ಪೊಲೀಸರು ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಾಲ್ತುಳಿತ ಮತ್ತು ಅವರ ದೇಹಗಳು ಒಂದರ ಮೇಲೊಂದರಂತೆ ರಾಶಿ ಬಿದ್ದ ನಂತರ ಭಕ್ತರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ಅತ್ಯಂತ ಕೆಟ್ಟ ಕಾಲ್ತುಳಿತ ದುರಂತಗಳಲ್ಲಿ ಒಂದಾಗಿದೆ. ಇದನ್ನೂ ಓದಿ: ಹಾಲಿನ ದರ ಹೆಚ್ಚಳವಾಗಿಲ್ಲ: ಸಿಎಂ

ಹೌದು, ಹತ್ರಾಸ್ ಜಿಲ್ಲೆಯ ಮುಘಲ್‌ಗರ್ಹಿ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮದ ವೇಳೆ ನೂಕುನುಗ್ಗಲಿನಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದಾರೆ.

ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ.

7 ಮಕ್ಕಳು ಹಾಗೂ ಓರ್ವ ಪುರುಷನನ್ನು ಹೊರತುಪಡಿಸಿದರೆ, ಮೃತಪಟ್ಟವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ ಉನ್ನತಮಟ್ಟದ ತನಿಖೆಗೆ ಆದೇಶಿಸಿದ್ದು ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

Related