ಬೆಂಗಳೂರು: ಹ್ಯಾಟ್ರಿಕ್ ಶಿವರಾಜಕುಮಾರ್ ನಟನೆಯ ಘೋಸ್ಟ್ ಚಿತ್ರ ಇಂದು ಬಿಡುಗಡೆಗೊಂಡಿದ್ದು, ಅಭಿಮಾನಿಗಳು ಈ ಚಿತ್ರವನ್ನು ನೋಡಿ ಶಿವಣ್ಣನಿಗೆ ಜೈಕಾರ ಹಾಕಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ದೊಡ್ಮನೆ ಎಂದರೆ ಅದಕ್ಕೆ ಒಂದು ಗೌರವವಿದೆ. ಇನ್ನು ದೊಡ್ಮನೆ ಹುಡುಗರ ಚಿತ್ರಗಳೆಂದರೆ ಅದಕ್ಕೆ ಕರ್ನಾಟಕದಲ್ಲಿ ಎಲ್ಲಿಲ್ಲದ ಬೇಡಿಕೆಗಳಿದೆ. ಪ್ರತಿಯೊಬ್ಬರ ಮನೆ ಮನೆಯಲ್ಲಿ ದೊಡ್ಮನೆ ಹುಡುಗರ ಮಾತಿದೆ.
ಹೌದು, ಶಿವರಾಜ್ಕುಮಾರ್ ನಟನೆಯ ‘ಘೋಸ್ಟ್’ ಸಿನಿಮಾ ಗುರುವಾರ (ಅ.19) ರಿಲೀಸ್ ಆಗಿದೆ. ಶ್ರೀನಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರಕ್ಕೆ ಅಕ್ಟೋಬರ್ 18ರ ಮಧ್ಯರಾತ್ರಿ ಫ್ಯಾನ್ ಶೋ ಆಯೋಜನೆ ಮಾಡಲಾಗಿತ್ತು. ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಸಿನಿಮಾ ಪ್ರದರ್ಶನ ಕಂಡಿದೆ. ಅಭಿಮಾನಿಗಳು ಆಗಮಿಸಿ ಈ ಚಿತ್ರವನ್ನು ಕಣ್ತುಂಬಿಕೊಂಡಿದ್ದಾರೆ.