ನಾಳೆ ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಸಿಎಂ ಪ್ರವಾಸ

ನಾಳೆ ಹಾವೇರಿ, ಧಾರವಾಡ ಜಿಲ್ಲೆಗಳಿಗೆ ಸಿಎಂ ಪ್ರವಾಸ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹಾವೇರಿ ಹಾಗೂ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಭಾನವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಲಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವ ತೆರಳಲಿರುವ ಸಿಎಂ ಬೊಮ್ಮಾಯಿ ಅವರು, ಶಿಗ್ಗಾಂವಿ ಮತ್ತು ಸವಣೂರಿನಲ್ಲಿ ವಕೀಲರ ಸಂಘಗಳ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.  ನಂತರ ಹಾವೇರಿ ನ್ಯಾಯಾಲಯದ ಆವರಣದಲ್ಲಿ ನಿರ್ಮಾಣವಾಗಿರುವ ವಕೀಲರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಲಿದ್ದಾರೆ.

 

Related