ಇಂಥ ವ್ಯಕ್ತಿಯ ನೇತೃತ್ವದಲ್ಲಿ ಪಠ್ಯ ಪರಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು.

ಇಂಥ ವ್ಯಕ್ತಿಯ ನೇತೃತ್ವದಲ್ಲಿ ಪಠ್ಯ ಪರಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ತಪ್ಪು.

ಬೆಂಗಳೂರು, ಜೂ 21 :  ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು ಎಂದು ಮಾಜಿ ಪ್ರಧಾನಿ ದೇವೇಗೌಡರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳ ಬಗ್ಗೆ 2022ರ ಜೂನ್‌ 18 ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ನಾನು ಭಾಗವಹಿಸಿದ್ದಾಗ, ನನ್ನ ಮೂಲಕ ತಮಗೆ ಮನವರಿಕೆ ಮಾಡಲು ನೀಡಿದ ಮನವಿ ಪತ್ರವನ್ನು ಇದಕ್ಕೆ ಲಗತ್ತಿಸಿರುತ್ತೇನೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ಕುವೆಂಪು ನೀಡುತ್ತೇನೆಂದು ಹೇಳಿದ್ದು ಕೂಡ ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದು, ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಜೊತೆಗೆ ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದ್ದಾರೆ.

Related