HDK City Rouds : ಮಳೆಯಿಂದ ನಷ್ಟ ಆಗಿರುವವರಿಗೆ ಶೇ.75ರಷ್ಟು ಪರಿಹಾರ ಕೊಡಲು ಆಗ್ರಹ.

15 ವರ್ಷಗಳಲ್ಲಿ ಬೆಂಗಳೂರಿಗೆ ಕೊಟ್ಟ ಅನುದಾನದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯ
ನಷ್ಟದ ಶೇ.75ರಷ್ಟು ಪರಿಹಾರ ಕೂಡಲೇ ನೀಡಬೇಕು ಎಂದು ಆಗ್ರಹ

ಬೆಂಗಳೂರು, ಮೇ 20 : ಕಳೆದ 15 ವರ್ಷಗಳಿಂದ ಬೆಂಗಳೂರಿನ ಅಭಿವೃದ್ಧಿಗೆ ಬಿಡುಗಡೆಯಾಗಿರುವ ಅನುದಾನದ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆಯಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಕೆ.ಆರ್.ಪುರ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿ, ಯಶವಂತಪುರ ಸೇರಿದಂತೆ ನಗರದಲ್ಲಿ ಎಷ್ಟು ಹಣ ಲೂಟಿ ಆಗಿದೆ ಎನ್ನುವುದು ನನಗೆ ಗೊತ್ತಿದೆ. ಹಿಟಾಚಿಯಲ್ಲಿ ಹಣವನ್ನು ಬಗೆಯೋದನ್ನು ಸಚಿವರು ನಿಲ್ಲಿಸಲಿ. ಸಚಿವರಾದ ಭೈರತಿ ಬಸವರಾಜ, ಮುನಿರತ್ನ, ಗೋಪಾಲಯ್ಯ, ಸೋಮಶೇಖರ್ ಮಳೆಯಿಂದ ಸಂಕಷ್ಟಕ್ಕೆ ಒಳಗಾದ ಜನರ ಕೆಲಸ ಮಾಡಲಿ ಕಿಡಿಕಾರಿದರು.


ಬೆಳಗ್ಗೆ 8 ಗಂಟೆಯಿಂದ 12.30 ವರೆಗೂ ದಾಸರಹಳ್ಳಿ ಕ್ಷೇತ್ರದಲ್ಲಿ ಸಂಚಾರ ಮಾಡಿದ ಮಾಜಿ ಮುಖ್ಯಮಂತ್ರಿಗಳು, 28 ಕ್ಷೇತ್ರಗಳಿಗೆ ಎಷ್ಟು ಹಣವನ್ನು 15 ವರ್ಷಗಳಲ್ಲಿ ಬಿಡುಗಡೆ ಮಾಡಿದ್ದಾರೆ ಮಾಹಿತಿ ಪಡೆಯುತ್ತೇನೆ. ಜನರ ಬದುಕಿನ ಪ್ರಶ್ನೆ. ಇದರಲ್ಲಿ ರಾಜಕಾರಣ ನಾನು ಮಾಡ್ತಿಲ್ಲ ಎಂದು ಹೇಳಿದರು.ಮಳೆಯಿಂದ ನಷ್ಟ ಆಗಿರುವವರಿಗೆ ಸರ್ಕಾರ ಸರಿಯಾದ ಪರಿಹಾರ ಕೊಡಬೇಕು. ತೋರಿಕೆಗೆ ಅಷ್ಟೋ ಇಷ್ಟೋ ಕೊಟ್ಟು ಸುಮ್ಮನಾಗಬಾರದು. ನಷ್ಟ ಆಗಿರುವ ಶೇ. 75 ದರಷ್ಟು ಪರಿಹಾರ ಕೊಡಬೇಕು. ಅದರಲ್ಲೂ ಅಧಿಕಾರಿಗಳು ಮತ್ತೆ ದುಡ್ಡು ಹೊಡೆಯಲು ನೋಡುತ್ತಾರೆ. ಹಾಗಾಗದಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜಕಾಲುವೆಗೆ 1600 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೀರಾ. ಆದರೆ ಕಾಮಗಾರಿ ನಡೆಯುತ್ತಿಲ್ಲ. ವಿಳಂಬ ಆಗಲು ಕಾರಣ ಏನು ಎಂದು ಪ್ರಶ್ನಿಸಿದರು.ಮುಖ್ಯಮಂತ್ರಿಗಳು ಹೇಳಿಕೆ ಕೊಡೋದು ಬೇಡ. ಕಾಮನ್ ಮ್ಯಾನ್ ಸಿಎಂ ಅಂತ ಆಗೋದು ಬೇಡ. ಸಮಸ್ಯೆ ಪರಿಹಾರ ಮಾಡಿ ಎಂದು ಒತ್ತಾಯಿಸಿದರು.

Related