ಜೆಡಿಎಸ್ ಪಕ್ಷದ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ: ಹೆಚ್.ಡಿ.ಕೆ

ಜೆಡಿಎಸ್ ಪಕ್ಷದ ಷರತ್ತುಗಳಿಗೆ ಒಪ್ಪಿದರೆ ಮೈತ್ರಿಗೆ ಸಿದ್ಧ: ಹೆಚ್.ಡಿ.ಕೆ

ಬೆಂಗಳೂರು: ಕರ್ನಾಟಕ ರಾಜ್ಯದ 2023 ನೆಯ ಸಾಲಿನ ವಿಧಾನಸಭಾ ಚುನಾವಣೆಯ ಮತದಾನ ನಡೆದಿದ್ದು, ನಾಳೆ 13 ಶನಿವಾರದಂದು ಫಲಿತಾಂಶ ಹೊರ ಬೀಳಲಿದ್ದು ಎಲ್ಲ ಪಕ್ಷದ ನಾಯಕರು ಕಾತುರದಿಂದ ಕಾಯುತ್ತಿದ್ದಾರೆ.

ರಾಜ್ಯದಲ್ಲಿ ಯಾವ ಪಕ್ಷ ತನ್ನ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲಿದೆ ಎಂಬುದು ಕುತೂಹಲದ ಸಂಗತಿ.

ಇನ್ನು ಜೆಡಿಎಸ್ ಪಕ್ಷದವರು, ನಮ್ಮ ಷರತ್ತುಗಳಿಗೆ ಒಪ್ಪುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್’ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

ಸಿಂಗಾಪುರಕ್ಕೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಕುಮಾರಸ್ವಾಮಿಯವರು, 50 ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಇದೆ. ಈ ಬಾರಿ ನಮ್ಮ ಷರತ್ತುಗಳನ್ನು ಒಪ್ಪಿಕೊಳ್ಳುವ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧರಿದ್ದೇವೆಂದು ಹೇಳಿದ್ದಾರೆ.

ಹಲವು ಸಮೀಕ್ಷೆಗಳು ಜೆಡಿಎಸ್ ಪಕ್ಷ ಬಹಳ ಕಡಿಮೆ ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ ಎಂದು ಹೇಳಿವೆ. ಆದರೆ, ನಮ್ಮ ಪಕ್ಷ 50 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಈ ಬಾರಿ ನನ್ನ ಷರತ್ತುಗಳನ್ನು ಈಡೇರಿಸಲು ಒಪ್ಪುವ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಸಮ್ಮಿಶ್ರ ಸರ್ಕಾರಗಳ ಅಡಿಯಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾದಾಗ, ಒಮ್ಮೆ ಬಿಜೆಪಿ (2006) ಮತ್ತು ನಂತರ ಕಾಂಗ್ರೆಸ್ (2018) ನೊಂದಿಗೆ ಕುಮಾರಸ್ವಾಮಿ ಅವರು ಎದುರಿಸಿದ ಬಿಕ್ಕಟ್ಟುಗಳಿಂದಾಗಿ ಕುಮಾರಸ್ವಾಮಿ ಅವರು ಈ ಬಾರಿ ದಿಟ್ಟ ನಿಲುವನ್ನು ಹೊಂದಿದ್ದಾರೆ.

ಹೀಗಾಗಿ ಈ ಬಾರಿ ಮೈತ್ರಿಗೆ ಸಹಿ ಹಾಕುವ ಮೊದಲು ಅವರ ಕೆಲವು ಷರತ್ತುಗಳನ್ನು ವಿಧಿಸಲು ಮುಂದಾಗಿದ್ದಾರೆ.

 

Related