ಎಚ್.ಡಿ.ಕೆ ಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಎಚ್.ಡಿ.ಕೆ ಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಮೊದಲಿನಿಂದಲೂ ಹೃದಯ ಸಮಸ್ಯೆ ಇದ್ದ ಕಾರಣ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಂದು ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ ಎಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನದ ವೇಳೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ತಮ್ಮ ತಂದೆ ಆರೋಗ್ಯವಾಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ನಿಖಿಲ್ ಕುಮಾರಸ್ವಾಮಿಯವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

‘ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ಪೂಜ್ಯ ತಂದೆಯವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು. ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದುರೆದು, ‘ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ’ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

Related