ರಾಜ್ಯದಲ್ಲಿ ಇನ್ನು 4 ದಿನ ಮಳೆ

ರಾಜ್ಯದಲ್ಲಿ ಇನ್ನು 4 ದಿನ ಮಳೆ

ರಾಜ್ಯದಲ್ಲಿ ಇನ್ನು ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ತುಮಕೂರು, ಹಾಸನ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಎಲ್ಲೋ ಹಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.

ಅಕ್ಟೋಬರ್ ೨೬ ರಂದು ರಾಜ್ಯದಿಂದ ಮುಂಗಾರು ನಿರ್ಗಮಿಸಲ್ಲಿದ್ದು, ಹಿಂಗಾರು ಮಾರುತಗಳು ಆಗಮಿಸುತ್ತಿರುವ ಹಿನ್ನೆಲೆ, ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Related