ಮುಂದಿನ ವಾರ ಹೈಕಮಾಂಡ್ ನಾಯಕರುಗಳು ರಾಜ್ಯಕ್ಕೆ ಭೇಟಿ: ಪರಂ!

ಮುಂದಿನ ವಾರ ಹೈಕಮಾಂಡ್ ನಾಯಕರುಗಳು ರಾಜ್ಯಕ್ಕೆ ಭೇಟಿ: ಪರಂ!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ನ ನಾಯಕರುಗಳು ಕೇಂದ್ರ ಮತ್ತು ರಾಜ್ಯದಲ್ಲಿ ಬಿರುಸಿನ ಚಟುವಟಿಕೆಗಳನ್ನು ಕೈಗೊಂಡಿದ್ದು, ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಕೇಂದ್ರದಲ್ಲಿ ತನ್ನ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದ್ದು, ಬಿಜೆಪಿಯನ್ನು ಈ ಬಾರಿ ಹೇಗಾದರೂ ಮಾಡಿ ಸೋಲಿಸಬೇಕೆಂದು ಮೈತ್ರಿಕೂಟದ ಮೂಲಕ ಭರ್ಜರಿ ಪ್ಲಾನ್ ನಡೆಯುತ್ತಿದೆ

ಈ ಬಾರಿ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾದರೆ ರಾಜ್ಯದ ಸಚಿವರನ್ನು ತಲೆದಂಡ ಮಾಡುವ ಎಚ್ಚರಿಕೆಯನ್ನು ಹೈಕಮಾಂಡ್ ನೀಡಿದ್ದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವಾರದಲ್ಲಿ ಕಾಂಗ್ರೆಸ್ ನ ಹೈಕಮಾಂಡ್ ನಾಯಕರುಗಳು ರಾಜ್ಯಕ್ಕೆ ಆಗಮಿಸಲಿದ್ದು ಈ ಬಾರಿ ಲೋಕಸಭಾ ಚುನಾವಣೆಗೆ ಯಾವ ಕ್ಷೇತ್ರಕ್ಕೆ ಯಾರೆಲ್ಲಾ ನಿಲ್ಲಬೇಕೆಂದು ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪರಮೇಶ್ವರ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಜವಾಬ್ದಾರಿ ತೆಗೆದುಕೊಂಡು ಪ್ರಚಾರ ಮಾಡಿ ಅಂತ ಹೇಳಿದ್ದಾರೆ. ಸಚಿವರ ತಲೆದಂಡ ಅನ್ನೋದನ್ನೂ ಹೇಳಿದ್ದಾರೆ. ಗೆಲ್ಲುವ ಕ್ಷೇತ್ರದಲ್ಲಿ ಸೋತರೆ ಸರಿಯಾಗಿ ಕೆಲಸ ಮಾಡಿಲ್ಲ ಅಂತ ತಿಳಿದುಕೊಳ್ಳಬೇಕಾಗುತ್ತದೆ ಅಂತ ಹೇಳಿದ್ದಾರೆ. ನೀವೆಲ್ಲ ಗಂಭೀರವಾಗಿ ಪರಿಗಣಿಸಬೇಕು. ಇಲ್ಲಾಂದರೆ ಕಷ್ಟ ಆಗುತ್ತೆ ಅಂತ ಹೇಳಿದ್ದಾರೆ ಎಂದರು.

ದೆಹಲಿಯಲ್ಲಿ ಸಂಯೋಜಕರ ಸಭೆಯಲ್ಲಿ ಭಾಗಿಯಾದ ವಿಚಾರವಾಗಿ ಮಾತನಾಡಿದ ಪರಮೇಶ್ವರ್, ನಮ್ಮನ್ನೆಲ್ಲ ಎಐಸಿಸಿ ಅಧ್ಯಕ್ಷಕರು ಲೋಕಸಭಾ ಚುನಾವಣೆ ತಯಾರಿಗೆ ಕರೆಸಿದ್ದರು. ಕರ್ನಾಟಕ ಮಾತ್ರ ಅಲ್ಲ ಎಲ್ಲಾ ರಾಜ್ಯದವರನ್ನು ಕರೆಸಿದ್ದರು. ದೇಶದಲ್ಲಿ ಒಟ್ಟು 5 ಕ್ಲಷ್ಟರ್ ಇದ್ದು ಕರ್ನಾಟಕ ಕ್ಲಸ್ಟರ್ ಒಂದರಲ್ಲಿದೆ ಎಂದರು.

 

Related