ಹಿಂದಿ ಶಿಕ್ಷಕರ ಸಮ್ಮೇಳ

ಹಿಂದಿ ಶಿಕ್ಷಕರ ಸಮ್ಮೇಳ

ಬೆಂಗಳೂರು: ದಾವಣಗೆರೆಯಲ್ಲಿ ರಾಜ್ಯ ಮಟ್ಟದ ಪ್ರೌಢಶಾಲಾ ಹಿಂದಿ ಶಿಕ್ಷಕರ ಶೈಕ್ಷಣಿಕ ಸಮ್ಮೇಳನವನ್ನು ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಸೆ.26ರಂದು ಹಮ್ಮಿಕೊಳ್ಲಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎಂ.ರಾಠೋಡ್ ತಿಳಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನಕ್ಕೆ ಮುಖ್ಯ ಅತಿಥಿಗಳಾಗಿ ವೈ.ಎನ್‌. ನಾರಾಯಣಸ್ವಾಮಿ, ಬಸವರಾಜ್ ಹೊರಟ್ಟಿ ಸೇರಿದಂತೆ ಅನೇಕ ಮುಖಂಡರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿವಿಧ ಜಿಲ್ಲೆಗಳಿಂದ ಸುಮಾರು 3000‌ ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಲಿದ್ದು, ಈ ಸಂದರ್ಭದಲ್ಲಿ ಪ್ರೌಢಶಾಲಾ ಹಿಂದಿ ಶಿಕ್ಷಕರ ಕೆಲ ಕುಂದು ಕೊರತೆಗಳ ಕುರಿತು ಮನವಿಯನ್ನು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅವರಿಗೆ ನೀಡಲಾಗುತ್ತದೆ ಎಂದರು.

ಶಿಕ್ಷಣ ಇಲಾಖೆಯ ಜಿಲ್ಲಾ ಹಂತದ ಕಚೇರಿಗಳಲ್ಲಿ ವಿಷಯ ಪರಿವೀಕ್ಷಕರ ಹುದ್ದೆಯನ್ನು ಮಂಜೂರು ಮಾಡಬೇಕು.

ಸರ್ಕಾರಿ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರಿಗೆ ಇಸಿಓ ಮತ್ತು ಬಿಆರ್‌ಪಿ ಹುದ್ದೆಗಳಿಗೆ ಅರ್ಜಿ ಹಾಕಲು ಅವಕಾಶ ಕೊಡಬೇಕು. ಪ್ರೌಢಶಾಲೆಗಳಲ್ಲಿ ಆರು ವಿಷಯಗಳ ಜೊತೆಗೆ ವೃತ್ತಿ ಶಿಕ್ಷಣಕ್ಕೂ ಪ್ರತ್ಯೇಕವಾಗಿ ಅವಕಾಶ ಮಾಡಿಕೊಡಬೇಕು. ಸರ್ಕಾರಿ ಶಾಲಾ ಮಕ್ಕಳಿಗೆ ಕೊಡುವ ಸಮವಸ್ತ್ರಗಳನ್ನು ಅನುದಾನಿತ ಶಾಲೆಗಳಿಗೂ ಸಹ ವಿಸ್ತರಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ   ಮುಬಾರಕ್ ಅಲಿ, ಬಿ.ಮಮತಾ, ಕೃಷ್ಣಮೂರ್ತಿ ಶೆಟ್ಟಿ   ಮಂಜುನಾಯ್ಕ್  ಮತ್ತಿತರರು ಉಪಸ್ಥಿತರಿದರು.

Related