ಜ್ಞಾನವ್ಯಾಪಿ ಮಸೀದಿಯೊಳಗೆ ಶಿವಲಿಂಗ ಪತ್ತೆ : ನಾಳೆನೇ ಕೋರ್ಟ ಗೆ ಅಂತಿಮ ವರದಿ

ಜ್ಞಾನವ್ಯಾಪಿ ಮಸೀದಿಯೊಳಗೆ ಸರ್ವೇ ಕಾರ್ಯ ನಡೆಯುತ್ತಿದೆ. ಸರ್ವೇ ವೇಳೆ ಮಸೀದಿಯೊಳಗೆ ಶಿವಲಿಂಗ ಪತ್ತೆಯಾಗಿದೆ. ಮಸೀದಿಯ ವೀಡಿಯೋ ಚಿತ್ರೀಕರಣವು ಪೂರ್ಣಗೊಂಡಿದ್ದು ನಂದಿಯ ಎದುರಿನಲ್ಲಿರುವ ಬಾವಿಯಲ್ಲಿ ಪುರಾತನ ಶಿವಲಿಂಗ ಪತ್ತೆಯಾಗಿದೆ ಎಂದು ಹಿಂದೂ ಪರ ವಕೀಲರು ಹೇಳಿದ್ದಾರೆ. ನಾಳೆ ಕೋರ್ಟ್ಗೆ (Court) ಸರ್ವೆ ರಿಪೋರ್ಟ್ ಸಲ್ಲಿಸಬೇಕಿದೆ.

ಮಸೀದಿಯ ಒಳಗೆ 2 ದಿನದಿಂದ ನಡೆಸಲಾದ ಸಮೀಕ್ಷೆಯು ಮಸೀದಿಯು ಈ ಮುಂಚೆ ಮಂದಿರವಾಗಿತ್ತು ಎಂಬ ವಾದ ದೃಢೀಕರಿಸುತ್ತಿದೆ ಅಂತ ಹೇಳಲಾಗುತ್ತಿದೆ. ಮೊಘಲ್ದೊರೆ ಔರಂಗಜೇಬ್ಕಾಶಿ ವಿಶ್ವನಾಥ ಮಂದಿರದ ಭಾಗವೊಂದನ್ನು ಕೆಡವಿ ನಿರ್ಮಿಸಿದ್ದ ಎನ್ನಲಾದ ಗ್ಯಾನವಾಪಿ ಮಸೀದಿಯಲ್ಲಿ ನಡೆಸಲಾದ ವಿಡಿಯೋ ಚಿತ್ರೀಕರಣವು ‘ಮಸೀದಿಯು ಈ ಮುಂಚೆ ಮಂದಿರವಾಗಿತ್ತು ಎಂಬ ತಮ್ಮ ವಾದವನ್ನು ಮತ್ತಷ್ಟು ದೃಢೀಕರಿಸುತ್ತಿದೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ. ನಿನ್ನೆ ಭಾನುವಾರವೂ ಮಸೀದಿಯೊಳಗೆ ಸರ್ವೆ ಕಾರ್ಯ ಮಾಡಲಾಗಿದೆ. ಈಗಾಗಲೇ ಶೇ.65ರಷ್ಟುಸಮೀಕ್ಷೆ ಮುಗಿದಿದೆ. ಉಳಿದ ಸಮೀಕ್ಷೆ ಈಗ ನಡೆಯುತ್ತಿದೆ. ನಾಳೆ ಅಂದರೆ ಮಂಗಳವಾರದೊಳಗೆ ಕೋರ್ಟ ಸೂಚನೆಯಂತೆ ಸಮೀಕ್ಷೆ ಮುಗಿಯಲಿದೆ. ಜೊತೆಗೆ ಕೋರ್ಟ್ಗೆ ಸಮೀಕ್ಷೆಯ ವರದಿ ಸಲ್ಲಿಸಲಾಗುತ್ತದೆ.

Related